ಬೆಳಗಾವಿ: ಮುಂದುವರಿದ ಮಳೆ ಆರ್ಭಟ, ಭೂಕುಸಿತದಿಂದ ಜನ ಜೀವನ ತತ್ತರ

ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ಬೆಳಗಾವಿ ಜಿಲ್ಲೆಗೆ ಸುಮಾರು ಎರಡೂವರೆ ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿರುವುದರ ಜೊತೆಗೆ, ನಗರದಲ್ಲಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು....
ಬೆಳಗಾವಿ: ಮುಂದುವರಿದ ಮಳೆ ಆರ್ಭಟ, ಭೂಕುಸಿತದಿಂದ ಜನ ಜೀವನ ತತ್ತರ
ಬೆಳಗಾವಿ: ಮುಂದುವರಿದ ಮಳೆ ಆರ್ಭಟ, ಭೂಕುಸಿತದಿಂದ ಜನ ಜೀವನ ತತ್ತರ
ಬೆಳಗಾವಿ: ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ಬೆಳಗಾವಿ ಜಿಲ್ಲೆಗೆ ಸುಮಾರು ಎರಡೂವರೆ ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿರುವುದರ ಜೊತೆಗೆ, ನಗರದಲ್ಲಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಕೃಷ್ಣ ಹಾಗೂ ಅದರ ಉಪ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಇಂದು ಸಂಜೆ 4 ಗಂಟೆ ಸುಮಾರಿಗೆ ಖಾನಾಪುರ ತಾಲೂಕಿನ ಲೋಂಡಾ ಸಮೀಪ ರೈಲ್ವೆ ಟ್ರ್ಯಾಕ್ ನಲ್ಲಿ ಮಣ್ಣು ಕುಸಿದಿದ್ದು , ರೈಲ್ವೆ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ರೈಲ್ವೆಅಧಿಕಾರಿಗಳು ,ಇಂಜಿನಿಯರ್ ಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಈ ನಡುವೆ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ದತ್ತವಾಡ ರಸ್ತೆಯಲ್ಲೂ ಭೂಕುಸಿತ ಸಂಭವಿಸಿದೆ. ಇದರಿಂದ ಸಂಚಾರಕ್ಕೆ ತೊಂದರೆಯುಂಟಾಗಿದೆ. ರಸ್ತೆ ಕುಸಿತ ಹಿನ್ನೆಲೆಯಲ್ಲಿ ಪೊಲೀಸರು ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಿದ್ದಾರೆ.
ಇನ್ನೂ ಹಲವು ಕಡೆಗಳಲ್ಲಿ ಭೂ ಕುಸಿತದ ಆತಂಕ ಎದುರಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com