ಅಂತರಗಂಗೆಯಲ್ಲಿ ಸ್ನಾನ ಮಾಡಲು ಹೋದ ಬೆಂಗಳೂರಿನ ಯುವಕ ನೀರು ಪಾಲು!

ಸ್ನೇಹಿತರ ದಿನದೊಂದು ಗೆಳೆಯರ ಜೊತೆಗೆ ತೆರಳಿದ್ದ ಬೆಂಗಳೂರು ಮೂಲದ ಯುವಕ ಅಂತರಗಂಗೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

Published: 04th August 2019 12:00 PM  |   Last Updated: 04th August 2019 07:37 AM   |  A+A-


Man drowns in Antharagange while swimming

ಸಾಂದರ್ಭಿಕ ಚಿತ್ರ

Posted By : SVN SVN
Source : Online Desk
ಚಾಮರಾಜನಗರ: ಸ್ನೇಹಿತರ ದಿನದೊಂದು ಗೆಳೆಯರ ಜೊತೆಗೆ ತೆರಳಿದ್ದ ಬೆಂಗಳೂರು ಮೂಲದ ಯುವಕ ಅಂತರಗಂಗೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿನ ಅಂತರಗಂಗೆಯಲ್ಲಿ ಸ್ನಾನ ಮಾಡಲು ಹೋದಾಗ ಬೆಂಗಳೂರಿನ ನಿವಾಸಿಯಾದ ಪ್ರಭು (28 ವರ್ಷ) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. 

ಮೂಲಗಳ ಪ್ರಕಾರ ಬೆಂಗಳೂರಿನಿಂದ 9 ಜನ ಸ್ನೇಹಿತರು ಪ್ರವಾಸಕ್ಕೆಂದು ಆಗಮಿಸಿದ್ದರು. ಮಹದೇಶ್ವರ ಸ್ವಾಮಿ ದೇಗುಲಕ್ಕೆ ತೆರಳಿದ ಸ್ನೇಹಿತರು ಇಲ್ಲಿನ ಅಂತರಗಂಗೆಯಲ್ಲಿ ಸ್ನಾನಕ್ಕೆ ಇಳಿದಿದ್ದಾರೆ. ಈ ಪೈಕಿ ಪ್ರಭುಗೆ ಮಾತ್ರ ಈಜು ಬರುತ್ತಿದ್ದರಿಂದ ಆತ ನೀರಿಗೆ ಧುಮುಕಿದ್ದಾನೆ. ಬಳಿಕ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿದ್ದಾನೆ. ಅಲ್ಲಿದ್ದ ಬೇರೆ ಯಾವ ಗೆಳೆಯರಿಗೂ ಈಜು ಬಾರದ ಹಿನ್ನೆಲೆಯಲ್ಲಿ ಮುಳುಗುತ್ತಿದ್ದ ಸ್ನೇಹಿತನನ್ನು ರಕ್ಷಿಸಲಾಗದೇ ಕೂಗಾಡಿ ಕೊನೆಗೆ ಪೋಲಿಸರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. 

ಯುವಕನ ಶೋಧಕಾರ್ಯವನ್ನು ಮಲೆಮಹದೇಶ್ವರ ಬೆಟ್ಟದ ಪೊಲೀಸರು ಮುಂದುವರಿಸಿದ್ದಾರೆ.
Stay up to date on all the latest ರಾಜ್ಯ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp