ಮಹಾರಾಷ್ಟ್ರದಲ್ಲಿ ಭಾರೀ ಮಳೆ ಹಿನ್ನಲೆ: ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಂಚಾರ ಸ್ಥಗಿತ

ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯಲ್ಲಿ ಭಾರಿ ಪ್ರಮಾಣದ ಭೂಕುಸಿತವುಂಟಾಗಿ ಪುಣೆ ಬೆಂಗಳೂರು ರಸ್ತೆ ...
ನೀರು ತುಂಬಿದ ರಸ್ತೆಯಲ್ಲಿ ಪ್ರಯಾಣಿಕರ ಸಂಚಾರ ಪರದಾಟ
ನೀರು ತುಂಬಿದ ರಸ್ತೆಯಲ್ಲಿ ಪ್ರಯಾಣಿಕರ ಸಂಚಾರ ಪರದಾಟ
ಬೆಳಗಾವಿ: ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯಲ್ಲಿ ಭಾರಿ ಪ್ರಮಾಣದ ಭೂಕುಸಿತವುಂಟಾಗಿ ಪುಣೆ ಬೆಂಗಳೂರು ರಸ್ತೆ ಸಂಪರ್ಕ ಕಡಿತವಾಗಿದೆ. ಈ ಹಿನ್ನಲೆಯಲ್ಲಿ ನಾಳೆ ಮಧ್ಯಾಹ್ನದ ವರೆಗೂ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ. 
ಭೂಕುಸಿತದಿಂದಾಗಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಿಪ್ಪಾಣಿ  ಮತ್ತು ಕೊಲ್ಹಾಪುರ ನಡುವಣ ವಾಹನ ಸಂಚಾರ ಕಳೆದ ರಾತ್ರಿಯಿಂದ ಸ್ಥಗಿತಗೊಂಡಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್  ತಿಳಿಸಿದ್ದಾರೆ.

ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ಉತ್ತರ ವಲಯದ ಐಜಿಪಿ ರಾಗವೆನ್ಸ್ರಾ ಸುಹಾಸ್ ಅವರು, ಕರ್ನಾಟಕ ಗಡಿಯಿಂದ  12 ಕಿ.ಮೀ ದೂರದ ಕೊಗನ ಕ್ರಾಸ್ ಬಳಿ ಭೂಕುಸಿತ ಸಂಭವಿಸಿದ್ದು, ಕೂಡಲೇ ಕೊಲ್ಹಾಪುರ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ವಾಹನ ಸಂಚಾರ ನಿಲ್ಲಿಸುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದರು. 

ಮುಂದಿನ ಆದೇಶದವರೆಗೆ ನಿಪ್ಪಾಣಿಯಿಂದ ಕೊಲ್ಹಾಪುರಕ್ಕೆ ಹೋಗುವ ಎಲ್ಲಾ ವಾಹನ ಸಂಚಾರ ನಿಲ್ಲಿಸಲಾಗಿದೆ. ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಪ್ಪಾಣಿಯಿಂದ ಕೊಲ್ಹಾಪುರಕ್ಕೆ ಸಂಚಾರ ಕೈಗೊಳ್ಳದಂತೆ ಅವರು ವಾಹನ ಸವಾರರಿಗೆ  ಮನವಿ ಮಾಡಿದ್ದು ಬುಧವಾರ ಸಂಜೆ ವೇಳೆಗೆ ದುರಸ್ತಿ ಕಾರ್ಯ ಪೂರ್ಣಗೊಂಡು ಸಂಚಾರ ಎಂದಿನಂತೆ ಸುಗಮವಾಗಲಿದೆ ಎಂದರು.

ನೆರೆಯ ಮಹಾರಾಷ್ಟ್ರದಲ್ಲಿ ಸತತ ಕಳೆದ ಎಂಟು-ಹತ್ತು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಪ್ರವಾಹ ಉಂಟಾಗಿದ್ದು ‌ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ‌ಮೇಲೆ‌ ಹರಿಯುತ್ತಿರುವುದರಿಂದ ಮಹಾರಾಷ್ಟ್ರ ಸಂಪರ್ಕ ‌ಸಂಪೂರ್ಣ ಕಡಿತಗೊಂಡಿದೆ.
ಕೃಷ್ಣಾ ನದಿ ಪ್ರವಾಹದ ಸಂಕಷ್ಟದ ನಡುವೆಯೇ ಬೆಳಗಾವಿ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಆಗಸ್ಟ್‌ ಮೊದಲ ವಾರದ ವಾಡಿಕೆಗಿಂತ ಮೂರು ಪಟ್ಟು ಹೆಚ್ಚು ಮಳೆ ಸುರಿಯುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com