ಪ್ರವಾಸೋದ್ಯಮ ಕೇಂದ್ರವಾಗಿ ಕರ್ನಾಟಕ ಅಭಿವೃದ್ಧಿಪಡಿಸಲು ಸರ್ಕಾರದ ಜೊತೆ ಇನ್ಫೋಸಿಸ್ ಫೌಂಡೇಶನ್ ಕೈ ಜೋಡಣೆ

ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಪ್ರವಾಸೋದ್ಯಮ ಕಾರ್ಯಪಡೆಯ ಮುಖ್ಯಸ್ಥೆಯಾಗಿ ಪ್ರವಾಸೋದ್ಯಮ...

Published: 06th August 2019 12:00 PM  |   Last Updated: 06th August 2019 02:28 AM   |  A+A-


CM B S Yedyurappa welcomed Infosys foundation president Sudha Murty

ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ಬರಮಾಡಿಕೊಂಡ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ

Posted By : SUD SUD
Source : The New Indian Express
ಬೆಂಗಳೂರು: ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಪ್ರವಾಸೋದ್ಯಮ ಕಾರ್ಯಪಡೆಯ ಮುಖ್ಯಸ್ಥೆಯಾಗಿ ಪ್ರವಾಸೋದ್ಯಮ ಇಲಾಖೆ ಜೊತೆಗೆ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಕೈಜೋಡಿಸಲಿದ್ದಾರೆ.

ನೂತನ ಕಾರ್ಯಪಡೆಯನ್ನು ಕಳೆದ ಭಾನುವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಿಸಿದರು. ಕರ್ನಾಟಕ ಪ್ರವಾಸೋದ್ಯಮ ವಿಷನ್ ಗ್ರೂಪ್ ಜೊತೆ ಕಾರ್ಯಪಡೆಯನ್ನು ಘೋಷಿಸಲಾಗಿದ್ದು ಅದನ್ನು ಮಾಜಿ ಪ್ರವಾಸೋದ್ಯಮ ಸಚಿವ ಆರ್ ವಿ ದೇಶಪಾಂಡೆ ರಚಿಸಿದ್ದರು. ಕಾರ್ಯಪಡೆಯಲ್ಲಿ ತಜ್ಞರು, ಪ್ರವಾಸೋದ್ಯಮದ ಬಗ್ಗೆ ದೂರದೃಷ್ಟಿ ಹೊಂದಿರುವವರು, ಸರ್ಕಾರಿ ಅಧಿಕಾರಿಗಳು ಮತ್ತು ಇತರ ಕೆಲವು ಷೇರುದಾರರು ಇರುತ್ತಾರೆ.

ಕರ್ನಾಟಕ ಪ್ರವಾಸೋದ್ಯಮ ವಿಷನ್ ಗ್ರೂಪ್ ನ ಅವಧಿ ಮುಕ್ತಾಯವಾಗಿತ್ತು. ಹೀಗಾಗಿ ಎರಡು ಸಮಿತಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಕಳೆದ ಭಾನುವಾರ ನಡೆದ ಸಭೆಯಲ್ಲಿ ಕಾರ್ಯಪಡೆ ರಚಿಸುವುದರಿಂದ ಕರ್ನಾಟಕದ ಪಾರಂಪರಿಕ ತಾಣಗಳನ್ನು ಗುರುತಿಸಿ ಜಾಗೃತಿ ಮೂಡಿಸಲಾಗುತ್ತದೆ. ಈ ವಿಷಯದಲ್ಲಿ ಸುಧಾಮೂರ್ತಿ ಮತ್ತು ಅವರ ಫೌಂಡೇಶನ್ ನ ಅನುಭವ, ಜ್ಞಾನ ಮತ್ತು ಸಂಶೋಧನೆಗಳನ್ನು ಬಳಸಿಕೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಕೆ ಎನ್ ರಮೇಶ್ ಹೇಳಿದರು.
Stay up to date on all the latest ರಾಜ್ಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp