ಮೈಸೂರು: ಕಬಿನಿ ಜಲಾಶಯದ ನೀರಿನ ಮಟ್ಟದಲ್ಲಿ ಹೆಚ್ಚಳ

ಕೊಡಗು ಹಾಗೂ ಕೇರಳದ ವೈನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಎಚ್ ಡಿ ಕೋಟೆ ತಾಲೂಕಿನ ಕಬಿನಿ ಜಲಾಶಯದ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದೆ.
ಕಬಿನಿ ಜಲಾಶಯ
ಕಬಿನಿ ಜಲಾಶಯ
ಬೆಂಗಳೂರು: ಕೊಡಗು ಹಾಗೂ ಕೇರಳದ ವೈನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಎಚ್ ಡಿ ಕೋಟೆ ತಾಲೂಕಿನ ಕಬಿನಿ ಜಲಾಶಯದ  ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದೆ.
ಕಬಿನ ಜಲಾಶಯದ ಒಳ ಹರಿವು 46 ಸಾವಿರ ಕ್ಯೂಸೆಕ್ಸ್ ಇದ್ದು, 40 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತದೆ. 2284 ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 2281 ಅಡಿಗಳಷ್ಟು ನೀರಿನ ಸಂಗ್ರಹವಿದೆ.
ಈ ಮಧ್ಯೆ, ಮಳೆ ಬಾಧಿತ ಜಿಲ್ಲೆಗಳಾದ ಕೊಡುಗ, ಧಾರವಾಡ, ಮಂಗಳೂರು, ಹಾಸನ, ಬೆಳಗಾವಿ, ಮೈಸೂರು , ಕಾರವಾರ ಮತ್ತು ಉಡುಪಿಯಲ್ಲಿನ ಎಲ್ಲಾ ಅಂಗನವಾಡಿ ಹಾಗೂ ಶಾಲಾ- ಕಾಲೇಜುಗಳಿಗೆ ಇಂದು ಜಿಲ್ಲಾಡಳಿತ ರಜೆ ಘೋಷಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com