ಬೆಂಗಳೂರು: ಮೊಬೈಲ್‌ನಲ್ಲಿ ಮಹಿಳಾ ಸಹೋದ್ಯೋಗಿಗಳ ಅಶ್ಲೀಲ ವಿಡಿಯೋ ಸೆರೆಹಿಡಿದು ಏನ್ಮಾಡ್ತಿದ್ದ ಗೊತ್ತ?

ವಿಕೃತ ಕಾಮಿಯೊಬ್ಬ ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು ತನ್ನ ಜೊತೆ ಕೆಲಸ ಮಾಡುತ್ತಿದ್ದ ಮಹಿಳಾ ಸಹೋದ್ಯೋಗಿಗಳ ಅಶ್ಲೀಲ ವಿಡಿಯೋ ಸೆರೆ ಹಿಡಿಯುತ್ತಿದ್ದು ಆತನನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. 
ಬೆಂಗಳೂರು: ಮೊಬೈಲ್‌ನಲ್ಲಿ ಮಹಿಳಾ ಸಹೋದ್ಯೋಗಿಗಳ ಅಶ್ಲೀಲ ವಿಡಿಯೋ ಸೆರೆಹಿಡಿದು ಏನ್ಮಾಡ್ತಿದ್ದ ಗೊತ್ತ?

ಬೆಂಗಳೂರು: ವಿಕೃತ ಕಾಮಿಯೊಬ್ಬ ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು ತನ್ನ ಜೊತೆ ಕೆಲಸ ಮಾಡುತ್ತಿದ್ದ ಮಹಿಳಾ ಸಹೋದ್ಯೋಗಿಗಳ ಅಶ್ಲೀಲ ವಿಡಿಯೋ ಸೆರೆ ಹಿಡಿಯುತ್ತಿದ್ದು ಆತನನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. 

ಬಂಧಿತ ಆರೋಪಿ ಆಕಾಶ್ ಶುಕ್ಲಾ ಉತ್ತರ ಪ್ರದೇಶ ಮೂಲದವನಾಗಿದ್ದು ಸಿಎ ಆಗಿ ಕೆಲಸ ಮಾಡುತ್ತಿದ್ದ. ಮಹಿಳೆಯರು ಕೂರುತ್ತಿದ್ದ ಟೇಬಲ್, ವಾಶ್ ರೂಂ, ಕೆಫೆಟೇರಿಯಾಗಳಲ್ಲಿ ಸೀಕ್ರೆಟ್ ಹಿಡನ್ ಕ್ಯಾಮೆರಾ ಇಟ್ಟು ರೆಕಾರ್ಡ್ ಮಾಡುತ್ತಿದ್ದ. ನಂತರ ಇದನ್ನು ಲ್ಯಾಪ್ ಟಾಪ್ ಗೆ ಡೌನ್ ಮಾಡಿ ವೀಕ್ಷಿಸುತ್ತಿದ್ದ. 

ವೀಕೆಂಡ್ ನಲ್ಲಿ ಸ್ನೇಹಿತರ ಜೊತೆ ಪಾರ್ಟಿ ಮಾಡುತ್ತಿದ್ದಾಗ ಈ ವಿಡಿಯೋಗಳನ್ನು ತೋರಿಸಿ ವಿಕೃತಿ ಮೆರೆಯುತ್ತಿದ್ದ. ಇತ್ತೀಚೆಗೆ ಕೆಫೆಟೇರಿಯದಲ್ಲಿ ಇದೇ ರೀತಿ ಮೊಬೈಲ್ ನಲ್ಲಿ ವಿಡಿಯೋ ಮಾಡಲು ಹೋಗಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಆರೋಪಿ ವಿರುದ್ಧ ಐಪಿಸಿ 354(ಲೈಂಗಿಕ ಕಿರುಕುಳ)ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com