ಕೊಡಗು: ಭೂಕುಸಿತದಿಂದ 11 ಮಂದಿ ನಾಪತ್ತೆ, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ತೊರಾ ಗ್ರಾಮದಲ್ಲಿ ಸಂಭವಿಸಿದ ಭೂ ಕುಸಿತದಿಂದ 11 ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ
ಕೊಡಗು: ಭೂಕುಸಿತದಿಂದ 11 ಮಂದಿ ನಾಪತ್ತೆ, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ತೊರಾ ಗ್ರಾಮದಲ್ಲಿ ಸಂಭವಿಸಿದ ಭೂ ಕುಸಿತದಿಂದ 11 ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಮೊನ್ನೆ ದಿನ ಭೂ ಕುಸಿತದಿಂದಾಗಿ ಏಳು ಮಂದಿ ಮೃತಪಟ್ಟಿದ್ದರು.

ಎನ್ ಡಿಆರ್ ಎಫ್ , ಸೇನೆಯಿಂದ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆದರೆ, ಏನೂ  ಪ್ರಯೋಜನವಾಗುತ್ತಿಲ್ಲ. ಶ್ವಾನ ದಳ, ಲೋಹಕದ ಶೋಧಕಗಳನ್ನು ಬಳಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆದರೆ, ನಾಪತ್ತೆಯಾಗಿದ್ದವರು ಪತ್ತೆಯಾಗಿಲ್ಲ ಎಂದು ಎಸ್ ಪಿ ಸುಮನ್ ಪನ್ನೇಕರ್ ತಿಳಿಸಿದ್ದಾರೆ.

ಮೊದಲಿಗೆ ಕೇವಲ 8 ಮಂದಿ ಮಾತ್ರ ನಾಪತ್ತೆಯಾಗಿದ್ದಾರೆ ಎನ್ನಲಾಗಿತ್ತು. ಆದರೆ, ಆರು ಮಂದಿ ಎಸ್ಟೇಟ್ ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಬಗ್ಗೆ ತೋರಾ ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ, ಕೇವಲ 8 ಮಂದಿ ಮಾತ್ರ ನಾಪತ್ತೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಅನ್ನೀಸ್ ಕೆ ಜಾಯ್ ಹೇಳಿದ್ದಾರೆ. 

ತೊರಾ ಗ್ರಾಮದಲ್ಲಿ ನೂರಾರು ಎಕರೆ ಜಮೀನುಗಳಿಗೆ ನೀರು ನುಗ್ಗಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ. ಆದಾಗ್ಯೂ ಜಿಲ್ಲೆಯಲ್ಲಿ ಸಂಪರ್ಕತೆ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ. ಗೋಣಿಕೊಪ್ಪಲು- ಪೊನ್ನಾಂಪೇಟೆ ರಸ್ತೆಯಲ್ಲಿ ಟ್ರಾಫಿಕ್  ಜಾಮ್ ಉಂಟಾಗಿತ್ತು. ಗೋಣಿಕೊಪ್ಪಲು ಪಟ್ಟಣದಲ್ಲಿ ಮಳೆ ಸ್ಪಲ್ಪ ಕ್ಷೀಣಿಸಿದೆ. ಕುಶಾಲನಗರ- ಮಡಿಕೇರಿ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com