ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ತಕ್ಷಣ 5 ಸಾವಿರ ಕೋಟಿ ರೂ. ಬಿಡುಗಡೆ ಮಾಡಿ- ಸಿದ್ದರಾಮಯ್ಯ 

ರಾಜ್ಯದಲ್ಲಿ ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಮಳೆ ಮತ್ತು ಪ್ರವಾಹದಿಂದ ಜನರು ತತ್ತರಿಸಿದ್ದಾರೆ. ಈ ಪ್ರಕೃತಿ ವಿಕೋಪವನ್ನು  ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ ಕೇಂದ್ರ ಸರ್ಕಾರ ಕೂಡಲೇ 5 ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ತಕ್ಷಣ 5 ಸಾವಿರ ಕೋಟಿ ರೂ. ಬಿಡುಗಡೆ ಮಾಡಿ- ಸಿದ್ದರಾಮಯ್ಯ 

ಬೆಂಗಳೂರು:ರಾಜ್ಯದಲ್ಲಿ ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಮಳೆ ಮತ್ತು ಪ್ರವಾಹದಿಂದ ಜನರು ತತ್ತರಿಸಿದ್ದಾರೆ. ಈ ಪ್ರಕೃತಿ ವಿಕೋಪವನ್ನು  ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ ಕೇಂದ್ರ ಸರ್ಕಾರ ಕೂಡಲೇ 5 ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.


ಕಾವೇರಿಯ ತಮ್ಮ ನಿವಾಸದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಶೇಕಡಾ 60 ರಷ್ಟು ಪ್ರದೇಶ ಜಲಾವೃತವಾಗಿದೆ. ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಆಗುತ್ತಿರುವ ಅತಿ ಹೆಚ್ಚಿನ ಮಳೆಯೇ ಇದಕ್ಕೆ ಕಾರಣ. ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಂದ 6.5 ಲಕ್ಷ ಕ್ಯೂಸೆಕ್ ನೀರು ಬಿಟ್ಟಿರುವುದು ಇದೇ ಮೊದಲು. ರಾಜ್ಯದ ಪರಿಸ್ಥಿತಿ ಗಂಭೀರವಾಗಿದ್ದು, ಇದನ್ನು ಗಮನಿಸಿ ಕೇಂದ್ರ ಸರ್ಕಾರ ತಕ್ಷಣ ನೆರವು ನೀಡಬೇಕು ಎಂದು ಆಗ್ರಹಿಸಿದರು.

ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರವಾಹ ಪರಿಸ್ಥಿತಿ ಪರಿಶೀಲನೆ ನಡೆಸಿದ್ದಾರೆ. ಗೃಹ ಸಚಿವ ಅಮಿತ್ ಶಾ,  ನಿರ್ಮಲಾ ಸೀತಾರಾಮನ್ ಪ್ರವಾಹ ಪರಿಸ್ಥಿತಿ ಪರಿಶೀಲನೆ ನಡೆಸಿದರೂ ಅದಕ್ಕೆ ಅಷ್ಟು ಗಂಭೀರತೆ ಇರುವುದಿಲ್ಲ ಪ್ರಧಾನ ಮಂತ್ರಿಗಳೇ ನೇರವಾಗಿ ವೈಮಾನಿಕ ಸಮೀಕ್ಷೆ ನಡೆಸಬೇಕಿತ್ತು.  ಪ್ರಧಾನಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕೆಂದು ಆಗ್ರಹ ಪೂರಕ ಒತ್ತಾಯ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com