ಪ್ರವಾಹ ಪರಿಹಾರ:  ರಾಯಚೂರು ಜಿಲ್ಲೆಯನ್ನು ಪರಿಗಣಿಸದ ಸರ್ಕಾರ

ರಾಜ್ಯದ 14 ಜಿಲ್ಲೆಗಳಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆ ಕೈಗೊಳ್ಳಲು ಸರ್ಕಾರ 100 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದೆ. ಆದರೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನಿಯಮದಂತೆ ರಾಯಚೂರು ಜಿಲ್ಲೆಯನ್ನು ಈ ಪಟ್ಟಿಗೆ ಸೇರಿಸಿಲ್ಲ.
ಪ್ರವಾಹ ಪರಿಹಾರ:  ರಾಯಚೂರು ಜಿಲ್ಲೆಯನ್ನು ಪರಿಗಣಿಸದ ಸರ್ಕಾರ

ಕಲಬುರಗಿ: ರಾಜ್ಯದ 14 ಜಿಲ್ಲೆಗಳಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆ ಕೈಗೊಳ್ಳಲು ಸರ್ಕಾರ 100 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದೆ. ಆದರೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನಿಯಮದಂತೆ ರಾಯಚೂರು ಜಿಲ್ಲೆಯನ್ನು ಈ ಪಟ್ಟಿಗೆ ಸೇರಿಸಿಲ್ಲ.

ಬೆಳಗಾವಿ ಜಿಲ್ಲೆಗೆ ಅತಿ ಹೆಚ್ಚು 25 ಕೋಟಿ, ಬಾಗಲಕೋಟೆ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ತಲಾ 10, ವಿಜಯಪುರ, ಯಾದಗಿರಿ, ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ, ಧಾರವಾಡ, ಗದಗ ಹಾಗೂ ಕಲಬುರಗಿ ಜಿಲ್ಲೆಗಳಿಗೆ ತಲಾ 5 ಕೋಟಿ ರೂಪಾಯಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. 

 ಉತ್ತರ ಕರ್ನಾಟಕದ ಇತರ ಜಿಲ್ಲೆಗಳಂತೆ ರಾಯಚೂರು ಜಿಲ್ಲೆಯಲ್ಲೂ ಪ್ರವಾಹ ಪರಿಸ್ಥಿತಿ ತಲೆದೋರಿದ್ದರು ಸರ್ಕಾರ ಈ ಜಿಲ್ಲೆಗೆ ಆದ್ಯತೆ ನೀಡಿಲ್ಲ. ರಾಯಚೂರು ಜಿಲ್ಲೆಯಲ್ಲಿ ಪ್ರವಾಹದಿಂದಾಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಹಲವು ಗ್ರಾಮಗಳು ಜಲಾವೃತಗೊಂಡಿವೆ. ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಿಗಿಂತಲೂ ರಾಯಚೂರಿನಲ್ಲಿ ಹೆಚ್ಚಿನ ಪ್ರಮಾಣದ ಹಾನಿಯಾಗಿದೆ. 

ಪ್ರವಾಹ ಪೀಡಿತ ರಾಯಚೂರು ಜಿಲ್ಲೆಗೆ ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡಾ ಆಗಮಿಸಿ, ವೈಮಾನಿಕ ಸಮೀಕ್ಷೆ ಕೂಡಾ ನಡೆಸಿದ್ದರು. ಆದಾಗ್ಯೂ ಈ ಜಿಲ್ಲೆಗೆ ಏಕೆ ಅನುದಾನ ಬಿಡುಗಡೆ ಮಾಡಿಲ್ಲ ಎಂಬುದು ತಿಳಿದುಬಂದಿಲ್ಲ. 

ಈ ಮಧ್ಯೆ ಸರ್ಕಾರ ಘೋಘಿಸಿದ ಪ್ರವಾಹ ಪೀಡಿತ ತಾಲೂಕುಗಳ ಪೈಕಿ ಹೈದ್ರಾಬಾದ್ ಕರ್ನಾಟಕ ಭಾಗದ ತಾಲೂಕುಗಳು ಸೇರಿದ್ದು, ರಾಯಚೂರು ಜಿಲ್ಲೆಯ ರಾಯಚೂರು, ಲಿಂಗಸಗೂರು ಹಾಗೂ ದೇವೆದುರ್ಗ ತಾಲೂಕುಗಳು ಕೂಡಾ ಸೇರಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com