ದಕ್ಷಿಣ ಕನ್ನಡ: ಬಸ್ಗಿಗೆ ಕಾಯುತ್ತಿದ್ದ ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ, ಓರ್ವಳ ಸ್ಥಿತಿ ಗಂಭೀರ

ಅತೀ ವೇಗದಲ್ಲಿ ಚಲಿಸುತ್ತಿದ್ದ ಕಾರೊಂದು ಕಾಲೇಜು ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿದ್ದು, ಓರ್ವಳ ಸ್ಥಿತಿ ಚಿಂತಾಜನಕವಾಗಿರುವ ಘಟನೆ ದಕ್ಷಿಣ ಕನ್ನಡ...

Published: 13th August 2019 05:15 PM  |   Last Updated: 13th August 2019 07:13 PM   |  A+A-


Accident1

ಸಾಂದರ್ಭಿಕ ಚಿತ್ರ

Posted By : Lingaraj Badiger
Source : UNI

ಮೂಡಬಿದಿರೆ: ಅತೀ ವೇಗದಲ್ಲಿ ಚಲಿಸುತ್ತಿದ್ದ ಕಾರೊಂದು ಕಾಲೇಜು ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿದ್ದು, ಓರ್ವಳ ಸ್ಥಿತಿ ಚಿಂತಾಜನಕವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಬೆಳುವಾಯಿ ಸಮೀಪ ಮಂಗಳವಾರ ನಡೆದಿದೆ.

ಬೆಳುವಾಯಿ ಮೂಡಾಯಿಕ್ಕಾಡ್ ನಿವಾಸಿ ಜಗನ್ನಾಥ ಮಡಿವಾಳ ಎಂಬವರ ಪುತ್ರಿ ಶುಭಲಕ್ಷ್ಮೀ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರು ಉಡುಪಿ ಹಿರಿಯಡ್ಕದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎಂ.ಕಾಂ ವಿದ್ಯಾಭ್ಯಾಸ ಮಾಡುತ್ತಿದ್ದರು.

ನಾಲ್ವರು ವಿದ್ಯಾರ್ಥಿನಿಯರು ಕಾಲೇಜಿಗೆ ತೆರಳಲು ಬೆಳಗ್ಗೆ ಬೆಳವಾಯಿ ಸಮೀಪದ ಕಾಂತಾವರ ಕ್ರಾಸ್ ನಲ್ಲಿ ಬಸ್ಸಿಗಾಗಿ ಕಾಯುತ್ತಿದ್ದರು. ಈ ವೇಳೆ ಮೂಡಬಿದಿರೆಯಿಂದ ಕಾರ್ಕಳ ಕಡೆಗೆ ಅತೀ ವೇಗವಾಗಿ ತೆರಳುತ್ತಿದ್ದ ಇನ್ನೋವಾ ಕಾರು ಅವರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಶುಭಲಕ್ಷ್ಮೀ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯರು ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಉಳಿದ ಮೂವರು ವಿದ್ಯಾರ್ಥಿನಿಯರಿಗೆ  ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಮೂಡಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.

Stay up to date on all the latest ರಾಜ್ಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp