ಕ್ಯಾಲಿಫೋರ್ನಿಯಾ ಮಾದರಿಯಲ್ಲಿ ಬೆಂಗಳೂರು ಅಭಿವೃದ್ಧಿ; ಯಡಿಯೂರಪ್ಪ

ಉದ್ಯಾನನಗರಿ ಬೆಂಗಳೂರನ್ನು ಭಾರತದ ಸಿಲಿಕಾನ್ ವ್ಯಾಲಿಯನ್ನಾಗಿ ಪರಿವರ್ತಿಸುವುದು ಸರ್ಕಾರದ ಉದ್ದೇಶ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಉದ್ಯಾನನಗರಿ ಬೆಂಗಳೂರನ್ನು ಭಾರತದ ಸಿಲಿಕಾನ್ ವ್ಯಾಲಿಯನ್ನಾಗಿ ಪರಿವರ್ತಿಸುವುದು ಸರ್ಕಾರದ ಉದ್ದೇಶ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸ್ವಾತಂತ್ರೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿಗೆ ‘ಬೆಂಗಳೂರು ಅಭಿವೃದ್ಧಿ ಕಾರ್ಯಪಡೆ’ಯನ್ನು ಬಲಪಡಿಸಲಾಗುವುದು. ನಗರವನ್ನು ಕ್ಯಾಲಿಫೋರ್ನಿಯಾ ಮತ್ತು ಸ್ಯಾನ್ ಫ್ರಾನ್ಸಿಸ್ಕೋ ಸಿಲಿಕಾನ್ ವ್ಯಾಲಿಯ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ ಎಂದರು. 

ತಾವು ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿ ಮೂರು ವಾರವಾಗಿದೆ ರಾಜ್ಯ ಬರ ಮತ್ತು ಭಾರೀ ಪ್ರವಾಹದಿಂದ ತತ್ತರಿಸಿದೆ, ಎಲ್ಲರೂ ಜೊತೆಗೂಡಿ ಸಂತ್ರಸ್ತರ ನೆರವಿಗೆ ನಿಲ್ಲೋಣ ಎಂದು ಕರೆ ನೀಡಿದರು.

ಕೇಂದ್ರ ಸರ್ಕಾರ ಕೂಡ ನೆರೆ ಹಾನಿಗೆ ತಕ್ಷಣ ಸ್ಪಂದಿಸಿದೆ. ನೆರೆಯಲ್ಲಿ ಸಿಲುಕಿದವರ ರಕ್ಷಣೆಗಾಗಿ ಸೇನೆ, ವಿಪತ್ತು ನಿರ್ವಹಣಾ ಪಡೆ,ಸೇನಾ ಹೆಲಿಕ್ಯಾಪ್ಟರ್, ರಕ್ಷಣಾ ದೋಣಿಗಳ ಸೌಲಭ್ಯ ಒದಗಿಸಿದೆ. ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಸದಾನಂದಗೌಡ, ಪ್ರಹ್ಲಾದ್ ಜೋಷಿ ಭೇಟಿ ನೀಡಿ ಹೆಚ್ಚಿನ ಪರಿಹಾರದ ಭರವಸೆ ನೀಡಿದ್ದಾರೆ. ನೆರೆ ಹಾನಿ ವರದಿ ಪಡೆದು ಹೆಚ್ಚಿನ ನೆರವಿಗೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com