ಪ್ರವಾಹ ಸಂತ್ರಸ್ತ ತಾಲೂಕುಗಳ ಪಟ್ಟಿಗೆ ಹೊಸದಾಗಿ 23 ತಾಲೂಕುಗಳು ಸೇರ್ಪಡೆ

ರಾಜ್ಯದಲ್ಲಿ ಕಳೆದೆರಡು ವಾರಗಳಿಂದ ಉಂಟಾಗಿರುವ ಭಾರಿ ಮಳೆ ಹಾಗೂ ನೆರೆ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈಗಾಗಲೇ ಪ್ರವಾಹ ಪೀಡಿತ ತಾಲೂಕುಗಳೆಂದು ಘೋಷಣೆಯಾಗಿರುವ 17 ಜಿಲ್ಲೆಗಳ 80 ತಾಲೂಕುಗಳ...
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕಳೆದೆರಡು ವಾರಗಳಿಂದ ಉಂಟಾಗಿರುವ ಭಾರಿ ಮಳೆ ಹಾಗೂ ನೆರೆ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈಗಾಗಲೇ ಪ್ರವಾಹ ಪೀಡಿತ ತಾಲೂಕುಗಳೆಂದು ಘೋಷಣೆಯಾಗಿರುವ 17 ಜಿಲ್ಲೆಗಳ 80 ತಾಲೂಕುಗಳ ಪಟ್ಟಿಗೆ ಹೊಸದಾಗಿ 12 ಜಿಲ್ಲೆಗಳ 23 ತಾಲೂಕುಗಳನ್ನು ಸೇರ್ಪಡೆ ಮಾಡಲಾಗಿದೆ.

ದಾವಣಗೆರೆ ಜಿಲ್ಲೆಯ ಹರಿಹರ, ಹೊನ್ನಾಳಿ ತಾಲೂಕುಗಳು, ಚಾಮರಾಜನಗರದ ಕೊಳ್ಳೆಗಾಲ, ಮೈಸೂರು ಜಿಲ್ಲೆಯ ಹುಣಸೂರು, ಪಿರಿಯಾಪಟ್ಟಣ, ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ, ಮಳವಳ್ಳಿ, ಪಾಂಡವಪುರ, ಶ್ರೀರಂಗಪಟ್ಟಣ, ಬಳ್ಳಾರಿ ಜಿಲ್ಲೆಯ ಹಡಗಲಿ, ಹರಪ್ಪನಹಳ್ಳಿ, ಕೊಪ್ಪಳ ಜಿಲ್ಲೆಯ ಗಂಗಾವತಿ, ಕೊಪ್ಪಳ, ರಾಯಚೂರು ಜಿಲ್ಲೆಯ ಮಾನ್ವಿ, ಸಿಂಧನೂರು, ಕಲಬುರಗಿ ಜಿಲ್ಲೆಯ ಚಿತ್ತಾಪುರ, ಕಲಬುರಗಿ, ಹಾವೇರಿ ಜಿಲ್ಲೆಯ ರಾಣೆಬೆನ್ನೂರು, ಹಾಸನ ಜಿಲ್ಲೆಯ ಅರಕಲಗೂಡು, ಹಾಸನ, ಹೊಳೆನರಸೀಪುರ, ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಚಿಕ್ಕಮಗಳೂರು ಜಿಲ್ಲೆಯ ತಾಲೂಕುಗಳು ಹೊಸದಾಗಿ ಪ್ರವಾಹ ಸಂತ್ರಸ್ತ ಪ್ರದೇಶಗಳ ಪಟ್ಟಿಗೆ ಸೇರಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com