ಪ್ರವಾಹ ಪರಿಸ್ಥಿತಿ: ಕೊಲ್ಲೂರು, ಕುಕ್ಕೆ ಸುಬ್ರಹ್ಮಣ್ಯ ದೇವಾಲಯಗಳಿಂದ ತಲಾ 1 ಕೋಟಿ ದೇಣಿಗೆ

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು ಲಕ್ಷಾಂತರ ಜನ ನಿರಾಶ್ರಿಉತರಾಗಿದ್ದಾರೆ.ಈ ನಡುವೆ ರಾಜ್ಯದ ಪ್ರಸಿದ್ದ ದೇವಾಲಯಗಳಾದ ಕೊಲ್ಲೂರು ಮೂಕಾಂಬಿಕಾ ದೇವಾಲಯ ಹಾಗೂ ಕುಕ್ಕೆ ಸುಬ್ರಹ್ಮಣ್ಯ...
ಕೊ;ಲ್ಲೂರು, ಕುಕ್ಕೆ ಸುಬ್ರಹ್ಮಣ್ಯ ದೇವಾಲಯ
ಕೊ;ಲ್ಲೂರು, ಕುಕ್ಕೆ ಸುಬ್ರಹ್ಮಣ್ಯ ದೇವಾಲಯ

ಮಂಗಳೂರು/ಉಡುಪಿ: ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು ಲಕ್ಷಾಂತರ ಜನ ನಿರಾಶ್ರಿಉತರಾಗಿದ್ದಾರೆ.ಈ ನಡುವೆ ರಾಜ್ಯದ ಪ್ರಸಿದ್ದ ದೇವಾಲಯಗಳಾದ ಕೊಲ್ಲೂರು ಮೂಕಾಂಬಿಕಾ ದೇವಾಲಯ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಗಳು ನೆರೆ ಸಂತ್ರಸ್ಥರಿಗೆ ತಲಾ 1 ಕೋಟಿ ರು. ದೇಣಿಗೆ ನೀಡಲು ನಿರ್ಧರಿಸಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಿಂದ ಮುಖ್ಯಮಂತ್ರಿ ನೆರೆ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ಹಣ ದೇಣಿಗೆ ನೀಡುವುದರ ಜೊತೆಗೆ 583 ಸೀರೆ, 1050 ಪಂಚೆ ಇನ್ನಿತರ ಅಗತ್ಯ ಸಾಮಗ್ರಿಗಳನ್ನು ನೀಡಲಾಗುತ್ತಿದೆ. ನೆರೆ ಪರಿಹಾರ ನಿಧಿಗೆ ಕೋಟಿ ರು. ನೀಡಲು ದೇವಸ್ಥಾನ ಕಮಿಟಿ ತೀರ್ಮಾನಿಸಿದೆ ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ತಿಳಿಸಿದ್ದಾರೆ.

ಇನ್ನೊಂದೆಡೆ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸಭೆ ಸೇರಿ ಮುಖ್ಯಮಂತ್ರಿಗಳ ಪ್ರವಾಹ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆಯನ್ನು ನೀಡಲು ತೀರ್ಮಾನ ತೆಗೆದುಕೊಂಡಿದೆ.ಈ ಬಗೆಗೆ ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಪ್ರಕಟಣೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com