ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ನಿಷೇಧ 

ಭಾರೀ ಮಳೆಯಿಂದ ರಸ್ತೆ ಹಾಳಾಗಿರುವುದರಿಂದ ಆಗುಂಬೆ ಘಾಟಿಯಲ್ಲಿ 12 ಟನ್ ಗಿಂತ ಹೆಚ್ಚು ತೂಕವಿರುವ ಭಾರೀ ವಾಹನಗಳ ಸಂಚಾರವನ್ನು ಶಿವಮೊಗ್ಗ ಜಿಲ್ಲಾಡಳಿತ ನಿಷೇಧಿಸಿದೆ.  
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಭಾರೀ ಮಳೆಯಿಂದ ರಸ್ತೆ ಹಾಳಾಗಿರುವುದರಿಂದ ಮತ್ತು ಭೂಕುಸಿತ ಉಂಟಾಗುವ ಸಾಧ್ಯತೆಯಿರುವ ಆತಂಕದಿಂದ ಆಗುಂಬೆ ಘಾಟಿಯಲ್ಲಿ 12 ಟನ್ ಗಿಂತ ಹೆಚ್ಚು ತೂಕವಿರುವ ಭಾರೀ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಶಿವಮೊಗ್ಗ ಜಿಲ್ಲಾಡಳಿತ ಆದೇಶ ಹೊರಡಿಸಿದೆ. 


ಈ ಸಂಬಂಧ ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 169ಎಯಲ್ಲಿ ಭಾರೀ ಮಳೆಯಿಂದ ಹಾನಿಗೀಡಾಗಿದೆ.


ಮುಂಗಾರು ಮಳೆ ಮುಗಿಯುವವರೆಗೆ ಈ ಹೆದ್ದಾರಿಯಲ್ಲಿ ಮಿನಿ ಬಸ್ ಗಳು, ಜೀಪು, ವ್ಯಾನ್ ಮತ್ತು ಕಾರುಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜುಲೈ 3ರಂದು ಜಿಲ್ಲಾಡಳಿತಕ್ಕೆ ಹೊರಡಿಸಿದ್ದ ಆದೇಶದಲ್ಲಿ ಹೆದ್ದಾರಿಯಲ್ಲಿ ಮಳೆಗಾಲ ಮುಗಿಯುವವರೆಗೆ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com