ಬೆಂಗಳೂರು: ಕಾರ್ಖಾನೆಯಲ್ಲಿ ಬೆಂಕಿ ಆಕಸ್ಮಿಕ, ಓರ್ವ ಕಾರ್ಮಿಕ ಸಾವು, ನಾಲ್ವರಿಗೆ ಗಾಯ

ಶನಿವಾರ ಮುಂಜಾನೆ 3.30 ರ ಸುಮಾರಿಗೆ ಬೆಂಗಳೂರಿನ ಡಿಜೆ ಹಳ್ಳಿಯ ಪೀಠೋಪಕರಣ ಉತ್ಪಾದನಾ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 25 ವರ್ಷದ ಯುವಕನೊಬ್ಬ ಉಸಿರುಗಟ್ಟಿ ಸಾವನ್ನಪ್ಪಿದ್ದರೆ.....
ಬೆಂಗಳುರಿನ ಕಾರ್ಖಾನೆಯಲ್ಲಿ ಅಗ್ನಿ ಅವಘಡ
ಬೆಂಗಳುರಿನ ಕಾರ್ಖಾನೆಯಲ್ಲಿ ಅಗ್ನಿ ಅವಘಡ

ಬೆಂಗಳೂರು: ಶನಿವಾರ ಮುಂಜಾನೆ 3.30 ರ ಸುಮಾರಿಗೆ ಬೆಂಗಳೂರಿನ ಡಿಜೆ ಹಳ್ಳಿಯ ಪೀಠೋಪಕರಣ ಉತ್ಪಾದನಾ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 25 ವರ್ಷದ ಯುವಕನೊಬ್ಬ ಉಸಿರುಗಟ್ಟಿ ಸಾವನ್ನಪ್ಪಿದ್ದರೆ, ನಾಲ್ವರು ಗಾಯಗೊಂಡಿದ್ದಾರೆ. ಬೆಂಕಿ ಕಾಣಿಸಿಕೊಂಡಾಗ ಕಾರ್ಮಿಕರು ನಿದ್ದೆ ಮಾಡುತ್ತಿದ್ದರು. ಕಾರ್ಖಾನೆಯ ಮಾಲೀಕ ಮನ್ಸೂರ್ ಖಾನ್ ಅವರನ್ನು ಡಿಜೆ ಹಳ್ಳಿ ಪೊಲೀಸರು ಬಂಧಿಸಿದ್ದು,ನಿರ್ಲಕ್ಷ್ಯ ಪ್ರಕರಣ ದಾಖಲಿಸಲಾಗಿದೆ.

ಮೃತ ಯುವಕ ಉತ್ತರ ಪ್ರದೇಶ ಮೂಲದ ಮುಲ್ಲಾರ್ ಎನ್ನಲಾಗಿದ್ದು  ಗಾಯಾಳುಗಳು ಗುಲ್ಮಾರ್, ನಜೀರ್, ಮುನೀರ್ ಮತ್ತು ಮುಜ್ಬೈರ್ ಎಂದು ಗುರುತಿಸಲಾಗಿದೆ.ಮುಲ್ಲಾರ್ ತಾನು ಬೆಂಕಿಯಿಂದ ಪಾರಾಗುವ ಸಲುವಾಗಿ ಶೌಚಾಲಯಕ್ಕೆ ಓಡಿದರೂ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.ಉಳಿದ ಕಾರ್ಮಿಕರನ್ನು ನೆರೆಹೊರೆಯ ಸಾರ್ವಜನಿಕರು ರಕ್ಷಿಸಿದ್ದಾರೆ.

ಮೂರು ಅಂತಸ್ತಿನ ಕಟ್ಟಡದ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎಲೆಕ್ಟ್ರಿಕ್ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣವೆಂದು ಶಂಕಿಸಲಾಗಿದೆಕಾರ್ಖಾನೆಯಲ್ಲಿ 10 ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಎಲ್ಲರೂ ಉತ್ತರ ಭಾರತದವರು, ಮತ್ತು ಈ ಘಟನೆ ನಡೆದಾಗ ಅವರಲ್ಲಿ ಐದು ಮಂದಿ ರಜೆಯಲ್ಲಿದ್ದರು ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com