ಬೆಂಗಳೂರು: ಫುಟ್ ಪಾತ್ ಮೇಲಿದ್ದ ಜನರ ಮೇಲೆ ಹರಿದ ಕಾರು, ಸಿಸಿಟಿವಿಯಲ್ಲಿ ಭೀಕರ ವಿಡಿಯೋ ಸೆರೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕುಡುಕ ಚಾಲಕನೋರ್ವ ಭಾರಿ ಅವಾಂತರ ಸೃಷ್ಟಿಸಿದ್ದು, ಕುಡಿತದ ಅಮಲಿನಲ್ಲಿ ಫುಟ್ ಪಾತ್ ಪಾದಾಚಾರಿಗಳ ಕಾರು ಹತ್ತಿಸಿರುವ ಭೀಕರ ಘಟನೆ ಹೆಚ್ಎಸ್ಆರ್ ಲೇಔಟ್ ನಲ್ಲಿ ನಡೆದಿದೆ. ಈ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ.

Published: 19th August 2019 09:21 AM  |   Last Updated: 19th August 2019 01:34 PM   |  A+A-


drunk person drove his car over pedestrians

ಫುಟ್ ಪಾತ್ ಮೇಲಿದ್ದ ಜನರ ಮೇಲೆ ಹರಿದ ಕಾರು

Posted By : Srinivasamurthy VN
Source : ANI

ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ನಲ್ಲಿ ಘಟನೆ, ಪ್ರಕರಣ ದಾಖಲು, ಚಾಲಕನ ಬಂಧನ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕುಡುಕ ಚಾಲಕನೋರ್ವ ಭಾರಿ ಅವಾಂತರ ಸೃಷ್ಟಿಸಿದ್ದು, ಕುಡಿತದ ಅಮಲಿನಲ್ಲಿ ಫುಟ್ ಪಾತ್ ಪಾದಾಚಾರಿಗಳ ಕಾರು ಹತ್ತಿಸಿರುವ ಭೀಕರ ಘಟನೆ ಹೆಚ್ಎಸ್ಆರ್ ಲೇಔಟ್ ನಲ್ಲಿ ನಡೆದಿದೆ. ಈ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ.

ಮೂಲಗಳ ಪ್ರಕಾರ ಜೆಪಿ ನಗರದ ಕೊತ್ತನೂರು ದಿಣ್ಣೆ ನಿವಾಸಿ ರಾಜೇಂದ್ರ ಕೆ ಎಂಬಾತ ಕಂಠಪೂರ್ತಿ ಮದ್ಯ ಸೇವಿಸಿ ಅಡ್ಡಾದಿಡ್ಡಿ ಕಾರು ಓಡಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ನಿಲ್ಲಿಸಿದ್ದ ಬೈಕ್‍ಗಳಿಗೆ ಡಿಕ್ಕಿ ಹೊಡೆದು ಫುಟ್‍ಪಾತ್ ಮೇಲೆ ಕಾರನ್ನು ಹತ್ತಿಸಿದ್ದಾನೆ. ಪರಿಣಾಮ ಫುಟ್‍ಪಾತ್ ಅಂಗಡಿಯ ಮುಂದೆ ನಿಂತಿದ್ದ ಹಾಗೂ ನಡೆದುಕೊಂಡು ಹೋಗುತ್ತಿದ್ದ ಒಟ್ಟು 8 ಜನರಿಗೆ ಡಿಕ್ಕಿಹೊಡೆದಿದ್ದಾನೆ. ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಕೂಡಲೇ ಅಲ್ಲಿದ್ದ ಸ್ಥಳೀಯರು ತಕ್ಷಣವೇ ಕಾರಿನ ಬಳಿಗೆ ಬಂದು ಗಾಯಾಳುಗಳನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಚಾಲಕನನ್ನು ಥಳಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ, ಆರೋಪಿ ಚಾಲಕ ರಾಜೇಂದ್ರನನ್ನು ಪೊಲೀಸರು ವಶಕ್ಕೆ ಪಡೆದು ತಪಾಸಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆತ ಮದ್ಯ ಸೇವಿಸಿರುವುದು ಖಚಿತವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಪ್ರಕರಣದ ಸಂಬಂಧ ಹೆಚ್‍ಎಸ್‍ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಚಾಲಕ ರಾಜೇಂದ್ರನನ್ನು ಬಂಧಿಸಿರುವ ಪೊಲೀಸರು ವಿಚಾರಗೆ ಒಳಪಡಿಸಿದ್ದಾರೆ.

Stay up to date on all the latest ರಾಜ್ಯ news with The Kannadaprabha App. Download now
facebook twitter whatsapp