ಕೇಂದ್ರದಿಂದ ಕರ್ನಾಟಕಕ್ಕೆ 1 ಸಾವಿರ ಕೋಟಿ ರೂ. ಬರ ಪರಿಹಾರ ಘೋಷಣೆ

ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಿಗೆ ಒಟ್ಟು 4,432 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಲು ಮಂಗಳವಾರ ಅನುಮತಿ ನೀಡಿದೆ.
ಅಮಿತ್ ಶಾ
ಅಮಿತ್ ಶಾ

ನವದೆಹಲಿ: ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಿಗೆ ಒಟ್ಟು 4,432 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಲು ಮಂಗಳವಾರ ಅನುಮತಿ ನೀಡಿದೆ.

ಕಳೆದ ವರ್ಷ ಹಿಂಗಾರು ಅವಧಿಯಲ್ಲಿ ಸಂಭವಿಸಿದ ಬರಕ್ಕೆ ಕೇಂದ್ರ ಸರ್ಕಾರ ಈಗ ಪರಿಹಾರ ಬಿಡುಗಡೆ ಮಾಡುತ್ತಿದೆ.

ಗೃಹ ಸಚಿವ ಅಮಿತ್‌ ಶಾ ಅಧ್ಯಕ್ಷತೆ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿದ್ದ ಉನ್ನತ ಮಟ್ಟದ ಸಮಿತಿ ಕೇಂದ್ರದಿಂದ ಹೆಚ್ಚುವರಿ ನೆರವು ಬಿಡುಗಡೆಗೆ ಇಂದು ಒಪ್ಪಿಗೆ ಸೂಚಿಸಿದೆ.

ಕರ್ನಾಟಕ, ಒಡಿಶಾ ಹಾಗೂ ಹಿಮಾಚಲ ಪ್ರದೇಶದಲ್ಲಿ ಉಂಟಾದ ನೈಸರ್ಗಿಕ ವಿಪತ್ತುಗಳಿಗೆ ಒಟ್ಟಾರೆ 4432.10 ಕೋಟಿ ರೂ. ನೆರವು ಘೋಷಣೆ ಮಾಡಿದೆ.

ರಾಜ್ಯದಲ್ಲಿನ ಹಿಂಗಾರು ಅವಧಿಯ ಬರ ಪರಿಸ್ಥಿತಿಗಾಗಿ 1029.39 ಕೋಟಿ ರೂ., ಒಡಿಶಾದಲ್ಲಿ ಚಂಡಮಾರು ಫನಿಯಿಂದಾದ ಹಾನಿಗೆ 3338.22 ಕೋಟಿ ರೂ. ಹಾಗೂ ಹಿಮಾಚಲ ಪ್ರದೇಶದಲ್ಲಿ ಉಂಟಾದ ಹಿಮಪಾತದಿಂದಾದ ನಷ್ಟ ಪರಿಹಾರವಾಗಿ 64.49 ಕೋಟಿ ರೂ. ನೆರವು ಬಿಡುಗಡೆ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com