ಪೊಲೀಸ್ ಅಧಿಕಾರಿಗಳ ವರ್ಗಾವಣೆ ಪ್ರಶ್ನಿಸಿ ಅರ್ಜಿ; 23 ಶಾಸಕರಿಗೆ ಹೈಕೋರ್ಟ್ ನೊಟೀಸ್ ಜಾರಿ 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ 23 ಶಾಸಕರಿಗೆ ಹೈಕೋರ್ಟ್ ನೊಟೀಸ್ ಜಾರಿ ಮಾಡಿದೆ. 
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ 23 ಶಾಸಕರಿಗೆ ಹೈಕೋರ್ಟ್ ನೊಟೀಸ್ ಜಾರಿ ಮಾಡಿದೆ. ನಿಯಮ ಪಾಲಿಸದೆ ಮತ್ತು ಚುನಾವಣಾ ಪ್ರತಿನಿಧಿಗಳ ಶಿಫಾರಸಿನ ಮೇರೆಗೆ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಆಧಾರದ ಮೇಲೆ ಹೈಕೋರ್ಟ್ ನೊಟೀಸ್ ಜಾರಿ ಮಾಡಿದೆ.


ಅಖಿಲ ಕರ್ನಾಟಕ ಪೊಲೀಸ್ ಮಹಾಸಂಘದ ಅಧ್ಯಕ್ಷ ವಿ ಶಶಿಧರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ ನ್ಯಾಯಾಲಯ ಮಾಜಿ ಸಿಎಂ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ರೋಶನ್ ಬೇಗ್, ರಾಮಲಿಂಗಾ ರೆಡ್ಡಿ ಸೇರಿದಂತೆ 23 ಶಾಸಕರಿಗೆ ನೊಟೀಸ್ ಜಾರಿ ಮಾಡಿದೆ.


ತಮ್ಮ ಇಚ್ಛೆಯ ಸ್ಥಳಗಳಿಗೆ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕೆಂದು ಶಾಸಕರು ಶಿಫಾರಸು ಪತ್ರವನ್ನು ನೀಡಿದ್ದನ್ನು ಮತ್ತು ಆ ಮನವಿಯನ್ನು ಹಿಂದಿನ ಮುಖ್ಯಮಂತ್ರಿ ಪಾಲಿಸಿದ್ದನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ. ತಮ್ಮ ಅರ್ಜಿಗೆ ಸರಿಯಾಗಿ ಶಿಫಾರಸು ಪತ್ರದ ಪ್ರತಿಯನ್ನು ಸಹ ನ್ಯಾಯಾಲಯಕ್ಕೆ ಶಶಿಧರ್ ಸಲ್ಲಿಸಿದ್ದರು.


ಕನ್ನಡ ಚಿತ್ರ ನಾತಿಚರಾಮಿಗೆ 5 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಚಲನಚಿತ್ರೋತ್ಸವ ನಿರ್ದೇಶಕರು, 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ-2018, ನಿರ್ದೇಶಕ ಬಿ ಎಸ್ ಲಿಂಗದೇವರು, ಅಕ್ಕ ಕಮ್ಯೂನಿಕೇಷನ್ಸ್ ಪ್ರೈ.ಲಿಮಿಟೆಡ್ ಮತ್ತು ತೇಜಸ್ವಿಮಿ ಎಂಟರ್ ಪ್ರೈಸಸ್ ಅವರಿಗೆ ನ್ಯಾಯಮೂರ್ತಿ ಹೆಚ್ ಟಿ ನರೇಂದ್ರ ಪ್ರಸಾದ್ ನೊಟೀಸ್ ಜಾರಿಗೊಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com