ಗ್ರಾಮೀಣಾಭಿವೃದ್ಧಿ ಕುರಿತು ಗ್ರಾಮ ಪಂಚಾಯ್ತಿಗಳಿಗೆ ಪರೀಕ್ಷೆ, ಟಾಪರ್ ಗೆ 5 ಲಕ್ಷ ರೂ. ಬಹುಮಾನ!

ಗ್ರಾಮ ಪಂಚಾಯ್ತಿಗಳಿಗೆ ಉತ್ತೇಜನ ನೀಡುವುದಕ್ಕಾಗಿ ಗ್ರಾಮೀಣ ಅಭಿವೃದ್ಧಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯ್ತಿಗಳಿಗೆ 150 ಪ್ರಶ್ನೆಗಳನ್ನು ಒಳಗೊಂಡ ಪರೀಕ್ಷೆ ಏರ್ಪಡಿಸಿದ್ದು, ಈ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆಯುವ ಮೂರು ಗ್ರಾಮ ಪಂಚಾಯ್ತಿಗಳಿಗೆ ತಲಾ 5 ಲಕ್ಷ ರೂಪಾಯಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಗ್ರಾಮ ಪಂಚಾಯ್ತಿಗಳಿಗೆ ಉತ್ತೇಜನ ನೀಡುವುದಕ್ಕಾಗಿ ಗ್ರಾಮೀಣ ಅಭಿವೃದ್ಧಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯ್ತಿಗಳಿಗೆ 150 ಪ್ರಶ್ನೆಗಳನ್ನು ಒಳಗೊಂಡ ಪರೀಕ್ಷೆ ಏರ್ಪಡಿಸಿದ್ದು, ಈ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆಯುವ ಮೂರು ಗ್ರಾಮ ಪಂಚಾಯ್ತಿಗಳಿಗೆ ತಲಾ 5 ಲಕ್ಷ ರೂಪಾಯಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ರಾಜ್ಯದಲ್ಲಿ ಒಟ್ಟು 6 ಸಾವಿರ ಗ್ರಾಮ ಪಂಚಾಯ್ತಿಗಳಿದ್ದು, ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಅರ್ಜಿ ಅಹ್ವಾನಿಸಿದೆ.

ಪ್ರತಿ ಗ್ರಾಮ ಪಂಚಾಯತಿಯೂ ತನ್ನ ವ್ಯಾಪ್ತಿಯಲ್ಲಿನ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನ, ಕುಡಿಯುವ ನೀರು, ಆರೋಗ್ಯ ಸ್ವಚ್ಛತೆ, ಶಿಕ್ಷಣ ಮತ್ತು ತೆರಿಗೆ ಸಂಗ್ರಹ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಎಷ್ಟರ ಮಟ್ಟಿಗೆ ಯಶಸ್ವಿಯಾಗಿದೆ ಎಂಬ ಬಗ್ಗೆ 'ಪಂಚತಂತ್ರ' ತಂತ್ರಾಂಶದಲ್ಲಿ 150 ಪ್ರಶ್ನೆಗಳನ್ನು ನಿಗದಿ ಮಾಡಿದ್ದು, ಅದಕ್ಕೆ ಗ್ರಾಮ ಪಂಚಾಯ್ತಿಗಳು ಉತ್ತರಿಸಬೇಕಿದೆ.

ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಪ್ರತಿ ತಾಲೂಕಿನ ಮೂರು ಪಂಚಾಯ್ತಿಗಳನ್ನು ಜಿಲ್ಲಾ ಪಂಚಾಯ್ತಿಗೆ ಕಳುಹಿಸಲಾಗುತ್ತದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ರಾಮ ಪಂಚಾಯ್ತಿಗಳು ಉತ್ತರಿಸಿರುವ ಅಂಶಗಳನ್ನು ಆಧರಿಸಿ ದಾಖಲೆ ಪರಿಶೀಲನೆ ಮಾಡಲಿದ್ದಾರೆ. ಬಳಿಕ ಆಯ್ಕೆ ಸಮಿತಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಅರ್ಹತೆ ಪಡೆದ ಗ್ರಾಮ ಪಂಚಾಯ್ತಿಗಳ ಅಂತಿಮ ಪಟ್ಟಿ ಸಲ್ಲಿಸಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com