ನೆರೆ ಸಂತ್ರಸ್ತರ ಬಳಿ ಯಾವುದೇ ದಾಖಲೆ ಕೇಳದೆ 10 ಸಾವಿರ ರೂ. ಪರಿಹಾರ ನೀಡಿ: ಶ್ರೀರಾಮುಲು ಸೂಚನೆ

ನೆರೆಯಿಂದಾಗಿ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಹಾನಿಯಾಗಿದ್ದು, ಅಂದಾಜು 7,750 ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆ. 339 ಮನೆಗಳು ಸಂಪೂರ್ಣ ಕುಸಿದಿದ್ದು, ಹಾನಿ ಬಗ್ಗೆ ಸಂಪೂರ್ಣ ಸಮೀಕ್ಷೆ ನಡೆಸಿ ಕೇಂದ್ರಕ್ಕೆ ವರದಿ ಸಲ್ಲಿಸಿ...
ಶ್ರೀರಾಮುಲು
ಶ್ರೀರಾಮುಲು

ಯಾದಗಿರಿ: ನೆರೆಯಿಂದಾಗಿ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಹಾನಿಯಾಗಿದ್ದು, ಅಂದಾಜು 7,750 ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆ. 339 ಮನೆಗಳು ಸಂಪೂರ್ಣ ಕುಸಿದಿದ್ದು, ಹಾನಿ ಬಗ್ಗೆ ಸಂಪೂರ್ಣ ಸಮೀಕ್ಷೆ ನಡೆಸಿ ಕೇಂದ್ರಕ್ಕೆ ವರದಿ ಸಲ್ಲಿಸಿ ಪರಿಹಾರಕ್ಕೆ ಮನವಿ ಮಾಡಲಾಗುವುದು ಎಂದು ಸಚಿವ ಬಿ.ಶ್ರೀರಾಮುಲು ಅವರು ಗುರುವಾರ ಹೇಳಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆಗಾಗಿ ಗುರುವಾರ ಯಾದಗಿರಿಗೆ ಆಗಮಿಸಿದ ಶ್ರೀರಾಮುಲು ಸುದ್ದಿಗಾರರ ಜತೆ ಮಾತನಾಡಿ, ಪ್ರವಾಹದಿಂದಾಗಿ ಜಿಲ್ಲೆಯಲ್ಲಿ ಅಂದಾಜು180 ಕೋಟಿ ರೂಪಾಯಿಗೂ ಹೆಚ್ಚು ಹಾನಿ ಸಂಭವಿಸಿದ್ದು, ಪರಿಹಾರ ಕೇಂದ್ರಗಳಲ್ಲಿ ಸಾಕಷ್ಟು ಜನ ಸಂತ್ರಸ್ತರು ವಾಸ್ತವ್ಯ ಹೂಡಿದ್ದಾರೆ. ಸಂತ್ರಸ್ತರಿಗೆ ಕೂಡಲೆ 10 ಸಾವಿರ ರೂ. ಚೆಕ್ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಸಂತ್ರಸ್ತ ಕುಟುಂಬಗಳಿಂದ ಯಾವುದೇ ದಾಖಲೆ ಕೇಳದೆ ಹಣ ಹಂಚಿಕೆ ಮಾಡಬೇಕು. ನೆರೆ ಸಂತ್ರಸ್ತರು ಬದುಕು ಕಟ್ಟಿಕೊಳ್ಳುವಂತಾಗಬೇಕು ಎಂಬುದು ಸರ್ಕಾರದ ಉದ್ದೇಶ. ಮುಖ್ಯಮಂತ್ರಿ ಅವರಿಗೆ ವರದಿ ಸಲ್ಲಿಸಿ ಹೆಚ್ಚಿನ ಅನುದಾನ ಬಿಡುಗಡೆಗೆ ಕೋರಲಾಗುವುದು ಎಂದು ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com