ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಆ. 31ರಂದು ಚುನಾವಣೆ: ಹೈಕೋರ್ಟ್ ಗೆ ಸರ್ಕಾರದ ಹೇಳಿಕೆ

ಕರ್ನಾಟಕ ಹಾಲು ಒಕ್ಕೂಟ(ಕೆಎಂಎಫ್)ದ ಅಧ್ಯಕ್ಷ ಸ್ಥಾನಕ್ಕೆ ಆಗಸ್ಟ್ 31ರಂದು ಚುನಾವಣೆ ನಡೆಸುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮಾಹಿತಿ ನೀಡಿದೆ.
ಎಚ್‌.ಡಿ. ರೇವಣ್ಣ
ಎಚ್‌.ಡಿ. ರೇವಣ್ಣ

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ(ಕೆಎಂಎಫ್)ದ ಅಧ್ಯಕ್ಷ ಸ್ಥಾನಕ್ಕೆ ಆಗಸ್ಟ್ 31ರಂದು ಚುನಾವಣೆ ನಡೆಸುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮಾಹಿತಿ ನೀಡಿದೆ.

ಕೆಎಂಎಫ್ ಅಧ್ಯಕ್ಷ ಸ್ಥಾನದ ಚುನಾವಣೆ ಮುಂದೂಡಿದ ಸರ್ಕಾರದ ಕ್ರಮ ಪ್ರಶ್ನಿಸಿ ಶಾಸಕ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸರ್ಕಾರಿ ವಕೀಲರು ಈ ಮಾಹಿತಿ ನೀಡಿದರು. ಇದನ್ನು ಪರಿಗಣಿಸಿದ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಅರ್ಜಿಯನ್ನು ವಿಲೇವಾರಿ ಮಾಡಿದೆ.

ಜುಲೈ ತಿಂಗಳ 29ರಂದು ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಿದ್ದ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆದೇಶ ರದ್ದು ಕೋರಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು.

ಚುನಾವಣೆಯನ್ನು ರಾಜಕೀಯ ದುರುದ್ದೇಶದಿಂದ ಮುಂದೂಡಲಾಗಿದೆ. ಅದಕ್ಕೆ ಪ್ರಧಾನ ಕಾರ್ಯದರ್ಶಿಗಳು ಸೂಕ್ತ ಕಾರಣ ನೀಡಿಲ್ಲ. ಚುನಾವಣಾ ವೇಳಾಪಟ್ಟಿ ಘೋಷಣೆಯಾದ ನಂತರ ಅದನ್ನು ಮುಂದೂಡಲು ಕಾನೂನಿನಲ್ಲಿ ಅವಕಾಶವಿಲ್ಲ. ಆದ್ದರಿಂದ ಚುನಾವಣೆಯನ್ನು ಮುಂದೂಡಿ ಜುಲೈ 29ರಂದು ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಿ, ಚುನಾವಣೆ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com