ದೇಶದಲ್ಲೇ ಅತಿ ಕಲುಷಿತ ನಗರಗಳಲ್ಲಿ ಬೆಂಗಳೂರು ಕೂಡ ಒಂದು!

ಭಾರತದ ಅತಿ ಹೆಚ್ಚು ಕಲುಷಿತ ನಗರಗಳಲ್ಲಿ ಪಟ್ಟಿಯಲ್ಲಿ ಬೆಂಗಳೂರು ಕೂಡ ಸೇರಿದೆ, ರಾಷ್ಟ್ರೀಯ ಸ್ವಚ್ಛ ಗಾಳಿ ಕಾರ್ಯಕ್ರಮ ಮಾಡಿದ ಪಟ್ಟಿಯ  102 ನಗರಗಳ ಪೈಕಿ ಬೆಂಗಳೂರು ಒಂದಾಗಿದೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಭಾರತದ ಅತಿ ಹೆಚ್ಚು ಕಲುಷಿತ ನಗರಗಳಲ್ಲಿ ಪಟ್ಟಿಯಲ್ಲಿ ಬೆಂಗಳೂರು ಕೂಡ ಸೇರಿದೆ, ರಾಷ್ಟ್ರೀಯ ಸ್ವಚ್ಛ ಗಾಳಿ ಕಾರ್ಯಕ್ರಮ ಮಾಡಿದ ಪಟ್ಟಿಯ  102 ನಗರಗಳ ಪೈಕಿ ಬೆಂಗಳೂರು ಒಂದಾಗಿದೆ.

ಕಳೆದ ಐದು ವರ್ಷಗಳಿಂದ ಬೆಂಗಳೂರಿನ ವಾಯು ಗುಣಮಟ್ಟದಲ್ಲಿ ಕಡಿಮೆಯಾಗಿದೆ ಎಂದು ಪರಿಸರ -ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಉಪ ಕಾರ್ಯದರ್ಶಿ  ಸತ್ಯೇಂದ್ರ ಕುಮಾರ್ ತಿಳಿಸಿದ್ದಾರೆ.

ಕಲುಷಿತ ನಗರಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 10 ಕೋಟಿ ರು ಅನುದಾನ ನಿಗದಿ ಪಡಿಸಿದೆ, ಮುಂದಿನ ಕೆಲ ತಿಂಗಳಲ್ಲಿ ಅನುದಾನವನ್ನು ಬೆಂಗಳೂರಿನಲ್ಲಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನೀಡಲಾಗುತ್ತದೆ, 

ವಾಯು ಮಾಲಿನ್ಯವನ್ನು ತಗ್ಗಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ಅದಕ್ಕಾಗಿ ಅನುಸರಿಸುವ ಕ್ರಮದ ಬಗ್ಗೆ ರಾಷ್ಚ್ರೀಯ ಹಸಿರು ಮಂಡಳಿಗೆ ವರದಿ ಸಲ್ಲಿಸಲಾಗುವುದು,  ಬೆಂಗಳೂರು, ಕಲಬುರಗಿ, ಹುಬ್ಬಳ್ಳಿ, ಧಾರವಾಡ ಮತ್ತು ದಾವಣಗೆರೆ ಕೂಡ ಕಲುಷಿತ ನಗರಗಳಾಗಿವೆ.

ಸರಿಯಾದ ರೀತಿಯ ರಸ್ತೆಗಳನ್ನು ನಿರ್ವಹಿಸಿದರೇ ದೂಳಿನ ಪ್ರಮಾಣ ಕಡಿಮೆಯಾಗುತ್ತದೆ. ಜೊತೆಗೆ ಕಸದ ನಿರ್ವಹಣೆ ಸರಿಯಾಗಿ ಮಾಡಬೇಕು., ದೆಹಲಿಯಲ್ಲಿರುವಂತೆ ಕಸ ತ್ಯಾಜ್ಯ ನಿರ್ವಹಣೆ ಘಟಕವನ್ನು ನಿರ್ಮಿಸುವುದು ಕಡ್ಡಾಯ ಮಾಡಬೇಕು ಎಂದು ಅವರು ತಿಳಿಸಿದ್ದಾರೆ. ಜೊತೆಗೆ ಸರಿಯಾದ ರೀತಿಯ ಸಂಚಾರ ನಿರ್ವಹಣೆಗೂ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com