ತಮಿಳುನಾಡಿಗೆ ಉಗ್ರರು ಪ್ರವೇಶಿಸಿರುವ ಶಂಕೆ, ಕರ್ನಾಟಕ ಕರಾವಳಿಯಲ್ಲಿ ಕಟ್ಟೆಚ್ಚರ

ಲಷ್ಕರ್‌ ಇ ತೊಯ್ಬಾ(ಎಲ್‌ಇಟಿ) ಉಗ್ರ ಸಂಘಟನೆಯ ಸದಸ್ಯರು ಅಕ್ರಮವಾಗಿ ತಮಿಳುನಾಡು ಪ್ರವೇಶಿಸಿರುವ ಶಂಕೆ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಉಡುಪಿ: ಲಷ್ಕರ್‌ ಇ ತೊಯ್ಬಾ(ಎಲ್‌ಇಟಿ) ಉಗ್ರ ಸಂಘಟನೆಯ ಸದಸ್ಯರು ಅಕ್ರಮವಾಗಿ ತಮಿಳುನಾಡು ಪ್ರವೇಶಿಸಿರುವ ಶಂಕೆ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಪಾಕಿಸ್ತಾನದ ಉಗ್ರನೋರ್ವನನ್ನು ಒಳಗೊಂಡಂತೆ ಆರು ಜನರು ತಮಿಳುನಾಡು ಪ್ರವೇಶಿಸಿರುವ ಮಾಹಿತಿ ಇದೆ. ಕರಾವಳಿ ಕಾವಲು ಪಡೆ ಪೊಲೀಸರು, ಪಾಕಿಸ್ತಾನದ ಉಗ್ರನ ಚಿತ್ರ ಹಾಗೂ ವಿವರಗಳನ್ನೊಳಗೊಂಡಿರುವ ನೋಟಿಸ್‌ಗಳನ್ನು ಮಲ್ಪೆ ಬಂದರು, ಪಡುಕೆರೆ ಬೀಚ್‌ ಪ್ರದೇಶಗಳಲ್ಲಿ ಅಂಟಿಸಿದ್ದಾರೆ. 

ಈ ಉಗ್ರರು ದೇಶದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಸಂಚು ರೂಪಿಸಿದ್ದು, ಶಂಕಿತರು ಕಂಡುಬಂದರೆ ತಕ್ಷಣ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಉಗ್ರ ಚಟುವಟಿಕೆಯ ಶಂಕೆ ಹಿನ್ನೆಲೆಯಲ್ಲಿ ನಗರದ ಪ್ರಮುಖ ಸ್ಥಳಗಳು, ಬಂದರು ಹಾಗೂ ಪ್ರವಾಸಿ ತಾಣಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ ಎಂದು ಎಸ್‌ಪಿ ನಿಶಾ ಜೇಮ್ಸ್‌ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com