ಕಡೆಗೂ ಸಿಕ್ಕ ಅನುಮೋದನೆ, ಬಿಬಿಎಂಪಿ ಬಜೆಟ್‌ಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಬಿಬಿಎಂಪಿಯ 2019-20ನೆ ಸಾಲಿನ ಬಜೆಟ್‌ಗೆ ಕೊನೆಗೂ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ಬಿಬಿಎಂಪಿ
ಬಿಬಿಎಂಪಿ

ಬೆಂಗಳೂರು: ಬಿಬಿಎಂಪಿಯ 2019-20ನೆ ಸಾಲಿನ ಬಜೆಟ್‌ಗೆ ಕೊನೆಗೂ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ನಗರಾಭಿವೃದ್ಧಿ ಇಲಾಖೆ ನೀಡಿದ್ದ ಅನುಮೋದನೆಯನ್ನು ರಾಜ್ಯ ಸರ್ಕಾರ ತಡೆ ಹಿಡಿದಿದ್ದ ಹಿನ್ನೆಲೆಯಲ್ಲಿ ಅಭಿವೃದ್ಧಿ ಕುಂಠಿತಗೊಂಡಿವೆ ಎಂದು ಪಾಲಿಕೆ ಸದಸ್ಯರು ಆರೋಪಿಸಿದ್ದರು. ಈ ಮಧ್ಯೆ ಮೇಯರ್ ಗಂಗಾಂಬಿಕೆ ಅವರು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಬಜೆಟ್‌ಗೆ ಅನುಮೋದನೆ ನೀಡುವಂತೆ ಮನವಿ ಮಾಡಿದ್ದರು. ಕಾಂಗ್ರೆಸ್ ಕೂಡ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿದ್ದರು.

ಬಜೆಟ್‌ ತಡೆ ಹಿಡಿಯಲು ಸರ್ಕಾರಕ್ಕೆ ಅಧಿಕಾರವಿದೆ. ಸಚಿವ ಸಂಪುಟದ ಅನುಮೋದನೆ ಪಡೆಯದೆ ನಗರಾಭಿವೃದ್ಧಿ ಇಲಾಖೆ ಬಜೆಟ್‌ ಅಂಗೀಕರಿಸಿದೆ. ಈ ರೀತಿಯ ತೀರ್ಮಾನ ಕೈಗೊಳ್ಳಲು ಹಿಂದಿನ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಕಾರಣ. ಆಗಿರುವ ತಪ್ಪು ಸರಿಪಡಿಸಲು ನಮ್ಮ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಪಾಲಿಕೆಯ ಬಿಜೆಪಿ ಸದಸ್ಯರು ರಾಜ್ಯ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com