ಬೆಳಗಾವಿ: ಪೋಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ವೀಡಿಯೋ ವೈರಲ್, ಆರೋಪಿಗಾಗಿ ಶೋಧ

 ಪೋಲೀಸ್ ಅಧಿಕಾರಿಯ ಸಮ್ಮುಖದಲ್ಲೇ ವ್ಯಕ್ತಿಯೊಬ್ಬ ತನ್ನ ರಿವಾಲ್ವರ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆಗಸ್ಟ್ 24 ರಂದು ರಾತ್ರಿ 8 ಗಂಟೆ ಸುಮಾರಿಗೆ 550 ನೇ ಗುರುನಾನಕ್ ಜಯಂತಿಯ ಸಂದರ್ಭದಲ್ಲಿ ಪ್ರಕಾಶ ಯಾತ್ರೆ ಅಂಗವಾಗಿ ನಿಪ್ಪಾಣಿಯಿಂದ ಗೋವಾ ಕಡೆಗೆ ಸಾಗುತ್ತಿದ್ದ ವಿಕಾಸ್ ಜ್ಯೋತಿ ರ್ಯಾಲಿಯಲ್ಲಿ ಈ ಘಟನೆ ನಡೆದಿದೆ
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಳಗಾವಿ: ಪೋಲೀಸ್ ಅಧಿಕಾರಿಯ ಸಮ್ಮುಖದಲ್ಲೇ ವ್ಯಕ್ತಿಯೊಬ್ಬ ತನ್ನ ರಿವಾಲ್ವರ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆಗಸ್ಟ್ 24 ರಂದು ರಾತ್ರಿ 8 ಗಂಟೆ ಸುಮಾರಿಗೆ 550 ನೇ ಗುರುನಾನಕ್ ಜಯಂತಿಯ ಸಂದರ್ಭದಲ್ಲಿ ಪ್ರಕಾಶ ಯಾತ್ರೆ ಅಂಗವಾಗಿ ನಿಪ್ಪಾಣಿಯಿಂದ ಗೋವಾ ಕಡೆಗೆ ಸಾಗುತ್ತಿದ್ದ ವಿಕಾಸ್ ಜ್ಯೋತಿ ರ್ಯಾಲಿಯಲ್ಲಿ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಮೆರವಣಿಗೆ ರಾಣಿ ಚೆನ್ನಮ್ಮ ವೃತ್ತವನ್ನು ತಲುಪಿದಾಗ, ಒಬ್ಬ ವ್ಯಕ್ತಿಯು ಮುಂದೆ ಬಂದು ಗುರುನಾನಕ್ ಭಾವಚಿತ್ರಕ್ಕೆ ಹೂವುಗಳನ್ನು ಅರ್ಪಿಸಿದನು, ನಂತರ ಅವನು ಸಿಖ್ ಸಮುದಾಯದ ಮುಖಂಡನಿಗೆ ಮಾಲಾರ್ಪಣೆ ಮಾಡಿ ಬಳಿಕ ತನ್ನಲ್ಲಿದ್ದ ರಿವಾಲ್ವರ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ.

"ನಾವು ಅದಾಗಲೇ ವ್ಯಕ್ತಿಯ ಗುರುತು ಪತ್ತೆಹಚ್ಚಿದ್ದು ನಾವವನನ್ನು ಹುಡುಕಲು ಪ್ರಯತ್ನಿಸುತ್ತಿದ್ದೇವೆ. " ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್ ಕುಮಾರ್ ಹೇಳಿದ್ದಾರೆ. ಮೆರವಣಿಗೆಯಲ್ಲಿ ಹಲವು ಪೋಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಆದರೆ ಕೆಲವರು ಗುಂಡು ಹಾರಿಸಿದ ವ್ಯಕ್ತಿಯ ಹಿಂದೆಯೇ ನಿಂತಿದ್ದರು.ಮೆರವಣಿಗೆ ನೋಡುವುದಕ್ಕೆ ಮಹಿಳೆಯರು, ಮಕ್ಕಳು ಸೇರಿ  1,200 ಕ್ಕೂ ಹೆಚ್ಚು ಜನರು ಜಮಾಯಿಸಿದ್ದರು ಎಂದು ಅವರು ಹೇಳಿದರು.

“ಗಾಳಿಯಲ್ಲಿ ಗುಂಡು ಹಾರಿಸಿದ ವ್ಯಕ್ತಿಯನ್ನು ನಾವು ಗುರುತಿಸಿದ್ದೇವೆ. ಖಡೆ ಬಜಾರ್ ಪೊಲೀಸ್ ಠಾಣೆಯಲ್ಲಿ ಸುಯೋ ಮೋಟು ಪ್ರಕರಣ ದಾಖಲಿಸುವ ಮೂಲಕ ನಾವು ಆತನನ್ನು ಹುಡುಕಲು ಪ್ರಾರಂಭಿಸಿದ್ದೇವೆ. ಸ್ಥಳದಲ್ಲಿದ್ದ ಪೊಲೀಸರ ಬಗ್ಗೆಯೂ ವಿಚಾರಿಸುತ್ತಿದ್ದೇವೆ. ಈ ಘಟನೆ ಕುರಿತಂತೆ ಉನ್ನತ ಅಧಿಕಾರಿಗಳಿಗೆ ವರದಿ ಮಾಡಲು ವಿಫಲವಾದ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ”ಎಂದುಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್ ಕುಮಾರ್ ಹೇಳಿದ್ದಾರೆ.ಅದಾಗ್ಯೂ ಜನ ಭಯಪಡುವಂತೆ ಮಾಡಿದ ಆ ವ್ಯಕ್ತಿಯ ವಿರುದ್ಧ ಪೋಲೀಸರು ಕ್ರಮ ತೆಗೆದುಕೊಳ್ಳದಂತೆ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ.

ಇದಕ್ಕೆ ಕೆಲ ದಿನಗಳ ಹಿಂದೆ ಬೆಳಗಾವಿಯಲ್ಲಿ ಯುವತಿಯೊಬ್ಬಳುಲ್ ರಾತ್ರಿ ವೇಳೆ ಬೆತ್ತಲಾಗಿ ಬೈಕ್ ಸವಾರಿ ನಡೆಸಿದ್ದಳೆನ್ನುವ ವೀಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಪೋಲೀಸರು ತನಿಖೆ ನಡೆಸುತ್ತಿದ್ದರೂ ಇದುವರೆಗೆ ಆ ಯುವತಿಯ ಸುಳಿವು ಪತ್ತೆಯಾಗಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com