ಐಎಂಎ ಹಗರಣ ತನಿಖೆ ತ್ವರಿತಗೊಳಿಸಲು ಸಿಬಿಐಗೆ ನಿರ್ದೇಶನ ನೀಡಿ: ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್ 

ಐಎಂಎ ಹಗರಣದಲ್ಲಿ ತನಿಖೆಯನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳುವಂತೆ ಸಿಬಿಐಗೆ ಕೇಂದ್ರ ಸರ್ಕಾರ ನೊಟೀಸ್ ಹೊರಡಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. 
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಐಎಂಎ ಹಗರಣದಲ್ಲಿ ತನಿಖೆಯನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳುವಂತೆ ಸಿಬಿಐಗೆ ಕೇಂದ್ರ ಸರ್ಕಾರ ನೊಟೀಸ್ ಹೊರಡಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ.


ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ. ವಿವಾದದ ಸ್ಥಿತಿಗತಿ ಆಧಾರದ ಮೇಲೆ ತನಿಖೆಯನ್ನು ಸಿಬಿಐ ವಿಳಂಬ ಮಾಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.


ಸಿಬಿಐ ಪರ ವಕೀಸರು ನ್ಯಾಯಾಲಯಕ್ಕೆ ಮಾಹಿತಿ ನೀಡಿ, ಕೇಂದ್ರ ಸರ್ಕಾರದಿಂದ ಹಗರಣದ ತನಿಖೆ ನಡೆಸಲು ಇನ್ನೂ ಅಧಿಸೂಚನೆ ಬಂದಿಲ್ಲ ಎಂದು ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ. 


ಐಎಂಎ ಗ್ರೂಪ್ ಆಫ್ ಕಂಪೆನೀಸ್ ನಲ್ಲಿ ಹೂಡಿಕೆ ಮಾಡಿದವರ ಹಿತಾಸಕ್ತಿಗಳನ್ನು ರಕ್ಷಿಸಲು ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧಾರದ ಮೇಲೆ ಕೋರ್ಟ್ ಈ ಆದೇಶ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com