ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ವಿಧಾನಸೌಧ ಮುಂಭಾಗದಲ್ಲಿ 'ಫಿಟ್ ಇಂಡಿಯಾ' ಅಭಿಯಾನಕ್ಕೆ ಚಾಲನೆ ನೀಡಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ವಿಧಾನಸೌಧ ಮುಂಭಾಗದಲ್ಲಿ 'ಫಿಟ್ ಇಂಡಿಯಾ' ಅಭಿಯಾನಕ್ಕೆ ಚಾಲನೆ ನೀಡಿದರು.

ಶೀಘ್ರದಲ್ಲೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಶುಭ ಸುದ್ದಿ: ಬಿಎಸ್ ಯಡಿಯೂರಪ್ಪ 

ಸೆಪ್ಟಂಬರ್‌ 7 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಈ ವೇಳೆ ಅವರಿಗೆ ಪ್ರವಾಹದ ಬಗ್ಗೆ ಮನವರಿಕೆ ಜತೆಗೆ ಹೆಚ್ಚಿನ ಪರಿಹಾರ ನೀಡುವಂತೆ ಕೋರಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ. 

ಬೆಂಗಳೂರು: ಸೆಪ್ಟಂಬರ್‌ 7 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಈ ವೇಳೆ ಅವರಿಗೆ ಪ್ರವಾಹದ ಬಗ್ಗೆ ಮನವರಿಕೆ ಜತೆಗೆ ಹೆಚ್ಚಿನ ಪರಿಹಾರ ನೀಡುವಂತೆ ಕೋರಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ. 


ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಅಭಿಯಾನವಾದ ಫಿಟ್ ಇಂಡಿಯಾ ಅಭಿಯಾನದ ಪ್ರಯುಕ್ತ ಇಂದು ವಿಧಾನಸೌಧದ ಮುಂಭಾಗ ಧ್ಯಾನಚಂದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ  ಚಾಲನೆ ನೀಡಿದರು. ಬಳಿಕ ಮಾತನಾಡಿ, ಸೆಪ್ಟೆಂಬರ್ 7 ರಂದು ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಪ್ರವಾಹ ಪರಿಸ್ಥಿತಿಯ ಕುರಿತು ‌ಮನವರಿಕೆ ಮಾಡುವ ಜತೆಗೆ ಹೆಚ್ಚಿನ ಪರಿಹಾರ ಕೋರಲಾಗುವುದು. ಕೇಂದ್ರ ಸರ್ಕಾರ ರಾಜ್ಯಕ್ಕೆ ಶೀಘ್ರ ಶುಭ ಸುದ್ದಿ ನೀಡಲಿದೆ ಎಂದು ಹೇಳಿದರು. 

ರಾಜ್ಯದಲ್ಲಿ ಕ್ರೀಡೆಯ ಉತ್ತೇಜನಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕಾರ್ಯನಿರವಾಗಿದೆ. ಶೀಘ್ರದಲ್ಲಿಯೇ ಆ ಎಲ್ಲಾ ಯೋಜನೆಗಳನ್ನು ಜಾರಿಗೆ ತರಲಿದೆ. ಜೊತೆಗೆ ಮೋದಿ ಅವರ ಮಹತ್ವಾಕಾಂಕ್ಷೆಯ ಫಿಟ್ ಇಂಡಿಯಾ ಅಭಿಯಾನವನ್ನು ನಾವೆಲ್ಲರು ಸೇರಿ ಯಶಸ್ವಿಗೊಳಿಸಬೇಕು ಅಂತ ಕರೆ ನೀಡಿದರು. ಅಲ್ಲದೆ, ಈ ಇಳಿ ವಯಸ್ಸಿನಲ್ಲೂ ಹಾಕಿ ಹಾಡುವ ಮೂಲಕ ಕ್ರೀಡಾಪಟುಗಳಿಗೆ ಪ್ರೋತ್ಸಾಹ ತುಂಬಿದರು.

ಈ ವೇಳೆ ಕ್ರೀಡಾಪಟು ಪ್ರಕಾಶ್ ನಂಜಪ್ಪ, ಸಲ್ಮಾನ್ ಪಾಷಾ, ಅರ್ಚನಾ ಕಾಮತ್ ಸಮಾರಂಭದಲ್ಲಿ ಭಾಗಿಯಾಗಿ ಯುವ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಿದರು. ಅಭಿಯಾನ ಕಾರ್ಯಕ್ರಮಕ್ಕೆ ಸಚಿವರಾದ ಸಿ.ಟಿ ರವಿ, ಬಸವರಾಜ್ ಬೊಮ್ಮಾಯಿ, ಆರ್ ಅಶೋಕ್ ಅವರು ಉಪಸ್ಥಿತರಿದ್ದರು.

Related Stories

No stories found.

Advertisement

X
Kannada Prabha
www.kannadaprabha.com