ಪ್ರಕರಣವನ್ನು ಕಾನೂನು ರೀತಿ ಮತ್ತು ರಾಜಕೀಯವಾಗಿ ಎದುರಿಸುತ್ತೇನೆ: ಡಿ.ಕೆ.ಶಿವಕುಮಾರ್

ಅಕ್ರಮ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಡಿ ಕೆ ಶಿವಕುಮಾರ್ ಇಂದು ವಿಚಾರಣೆಗೆ ಹಾಜರಾಗಲಿದ್ದಾರೆ.
ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್

ಬೆಂಗಳೂರು: ಅಕ್ರಮ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಡಿ ಕೆ ಶಿವಕುಮಾರ್ ಇಂದು ವಿಚಾರಣೆಗೆ ಹಾಜರಾಗಲಿದ್ದಾರೆ.

ಇಂದು ಮಧ್ಯಾಹ್ನ 1 ಗಂಟೆಗೆ ದೆಹಲಿಯ ಜಾರಿ ನಿರ್ದೇಶನಾಲಯದ ಕಚೇರಿಗೆ ತೆರಳಿ ಅವರು ವಿಚಾರಣೆಗೆ ಹಾಜರಾಗಲಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಶಿವಕುಮಾರ್, ಗುಜರಾತ್ ಕಾಂಗ್ರೆಸ್ ಶಾಸಕರಿಗೆ ಆತಿಥ್ಯ, ರಕ್ಷಣೆ ನೀಡಿದ್ದಕ್ಕಾಗಿ ನನ್ನ ಮೇಲೆ ಐಟಿ ದಾಳಿ ನಡೆಸಲಾಗಿತ್ತು. ಇದೊಂದು ರಾಜಕೀಯ ಪ್ರೇರಿತ ದಾಳಿಯಾಗಿದ್ದು, ಕಾಂಗ್ರೆಸ್ಸಿನ ನಿಷ್ಠಾವಂತ ಹಾಗೂ ಸೈನಿಕನಂತೆ ಜವಾಬ್ದಾರಿಯುತ ರಾಜಕಾರಣಿಯಾಗಿ ಪಕ್ಷ ನೀಡಿದ ಜವಾಬ್ದಾರಿಯನ್ನು ನಾನು ನಿರ್ವಹಿಸಿದ್ದೇನೆ. ಅದಕ್ಕಾಗಿ ನನ್ನನ್ನು ಗುರಿಯಾಗಿಸಲಾಗಿದೆ. ಕಾನೂನು ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದ್ದು, ಕಾನೂನುಬದ್ಧವಾಗಿ ಮತ್ತು ರಾಜಕೀಯವಾಗಿ ಇದನ್ನು ಎದುರಿಸುತ್ತೇನೆ ಎಂದಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com