ಉಪ ಚುನಾವಣೆ: ಮತದಾನಕ್ಕೆ ಅಗತ್ಯ ಭದ್ರತೆ, ನಾಳೆಯಿಂದ ಡಿ.5ರವರೆಗೆ ನಗರದಲ್ಲಿ ನಿಷೇಧಾಜ್ಞೆ- ಭಾಸ್ಕರ್ ರಾವ್

ಬೆಂಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಇದೇ 5ರಂದು ನಡೆಯಲಿರುವ ಉಪಚುನಾವಣೆಗೆ ಎಲ್ಲಾ ಅಗತ್ಯ ಭದ್ರತೆ ಒದಗಿಸಲು ಕ್ರಮಕೈಗೊಳ್ಳಲಾಗಿದ್ದು, ನಾಳೆ ಸಂಜೆ 6 ಗಂಟೆಯಿಂದ ಡಿಸೆಂಬರ್ 5ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸರ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

Published: 02nd December 2019 03:23 PM  |   Last Updated: 02nd December 2019 03:23 PM   |  A+A-


Commissioner

ಪೊಲೀಸ್ ಆಯುಕ್ತ ಭಾಸ್ಕರ್ ರಾವ್

Posted By : Nagaraja AB
Source : UNI

ಬೆಂಗಳೂರು: ಬೆಂಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಇದೇ 5ರಂದು ನಡೆಯಲಿರುವ ಉಪಚುನಾವಣೆಗೆ ಎಲ್ಲಾ ಅಗತ್ಯ ಭದ್ರತೆ ಒದಗಿಸಲು ಕ್ರಮಕೈಗೊಳ್ಳಲಾಗಿದ್ದು, ನಾಳೆ ಸಂಜೆ 6 ಗಂಟೆಯಿಂದ ಡಿಸೆಂಬರ್ 5ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸರ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಕೆ.ಆರ್‌.ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆಗೆ ಭಾರಿ  ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ 28 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಸುಗಮ ಮತ್ತು ಶಾಂತಿಯುತ ಮತದಾನಕ್ಕೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಚುನಾವಣಾ ಭದ್ರತೆಗಾಗಿ ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, 7 ಮಂದಿ ಡಿಸಿಪಿಗಳು, 14 ಮಂದಿ ಎಸಿಪಿಗಳು, 30 ಪೊಲೀಸ್ ಇನ್ಸ್‌ ಪೆಕ್ಟರ್ ಗಳು, 68 ಪಿಎಸ್‌ಐಗಳು, 160 ಎಎಸ್‌ಐ ಗಳು 1666  ಮುಖ್ಯ ಪೇದೆ, ಪೇದೆಗಳನ್ನು ನಿಯೋಜಿಸಲಾಗಿದೆ. ಇವರ ಜೊತೆಗೆ 951 ಮಂದಿ ಗೃಹ ರಕ್ಷಕ ದಳದ ಸಿಬ್ಬಂದಿ ಭದ್ರತೆ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

Stay up to date on all the latest ರಾಜ್ಯ news with The Kannadaprabha App. Download now
facebook twitter whatsapp