ಸಿಎಂ ಯಡಿಯೂರಪ್ಪ ವಿರುದ್ಧ ಎಫ್ ಐಆರ್ ದಾಖಲು: ಸಂಜೀವ್ ಕುಮಾರ್

ವೀರಶೈವ ಲಿಂಗಾಯತ ಸಮುದಾಯದ ಮತದಾರರ ಒಂದೇ ಒಂದು ಮತವೂ ಬಿಜೆಪಿ ಬಿಟ್ಟು ಆ ಕಡೆ ಈ ಕಡೆ ಹೋಗುವಂತಿಲ್ಲ ಎಂದು ಹೇಳಿಕೆ ನೀಡಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ವಿರುದ್ಧ ದೂರು ದಾಖಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.
ಸಂಜೀವ್ ಕುಮಾರ್
ಸಂಜೀವ್ ಕುಮಾರ್

ಬೆಂಗಳೂರು: ವೀರಶೈವ ಲಿಂಗಾಯತ ಸಮುದಾಯದ ಮತದಾರರ ಒಂದೇ ಒಂದು ಮತವೂ ಬಿಜೆಪಿ ಬಿಟ್ಟು ಆ ಕಡೆ ಈ ಕಡೆ ಹೋಗುವಂತಿಲ್ಲ ಎಂದು ಹೇಳಿಕೆ ನೀಡಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ವಿರುದ್ಧ ದೂರು ದಾಖಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.

ಚುನಾವಣಾ ಆಯೋಗದ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರದ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವೀರಶೈವ ಸಮುದಾಯದ ಮತದಾರರಿಗೆ ಆಮಿಷ ಒಡ್ಡಿದ ಆರೋಪ ಸಂಬಂಧ ದೂರು ಬಂದಿದೆ ಸಿಎಂ ವಿರುದ್ಧ ದೂರು ಸ್ವೀಕರಿಸಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದರು.

ರಾಜ್ಯದ ಹದಿನೈದು ಕ್ಷೇತ್ರಗಳ ಉಪಚುನಾವಣೆ ಮತದಾನ ಡಿಸೆಂಬರ್ ೫ಕ್ಕೆ ನಡೆಯಲಿದ್ದು ನಾಳೆ (ಡಿ. ೩) ಸಂಜೆ ಆರಕ್ಕೆ ಬಹಿರಂಗ ಪ್ರಚಾರ ಅಂತ್ಯವಾಗಲಿದೆ.ಬಳಿಕ ಮನೆ ಮನೆ ಪ್ರಚಾರ ಪ್ರಾರಂಭವಾಗಲಿದೆ. 

ಮಕ್ತ ಹಾಗೂ ನ್ಯಾಯಸಮ್ಮತ ಮತದಾನ ನಡೆಯುವುದಕ್ಕೆ ಅನುಸರಿಸಬೇಕಾದ ಕ್ರಮಗಳನ್ನು ತಪ್ಪದೆ ಪಾಲಿಸಬೇಕೆಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com