5 ಕೊಲೆ ಮಾಡಿದ್ದ ನರ ಹಂತಕ ಪತಿಗೆ ಗಲ್ಲು ಶಿಕ್ಷೆ: ಹೊಸಪೇಟೆ ಕೋರ್ಟ್ ನಿಂದ ಮಹತ್ವದ ತೀರ್ಪು

ಪತ್ನಿಯ ಶೀಲ ಶಂಕಿಸಿ ಪತ್ನಿ ಹಾಗೂ ಆಕೆಯ ಸಹೋದರಿ ಮತ್ತು ತನ್ನ ಮೂವರು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ನರ ಹಂತಕ ಪತಿಗೆ ಹೊಸಪೇಟೆ ಕೋರ್ಟ್ ಬುಧವಾರ ಗಲ್ಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

Published: 04th December 2019 03:28 PM  |   Last Updated: 04th December 2019 03:28 PM   |  A+A-


hanging

ಸಾಂದರ್ಭಿಕ ಚಿತ್ರ

Posted By : Lingaraj Badiger
Source : RC Network

ಹೊಸಪೇಟೆ: ಪತ್ನಿಯ ಶೀಲ ಶಂಕಿಸಿ ಪತ್ನಿ ಹಾಗೂ ಆಕೆಯ ಸಹೋದರಿ ಮತ್ತು ತನ್ನ ಮೂವರು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ನರ ಹಂತಕ ಪತಿಗೆ ಹೊಸಪೇಟೆ ಕೋರ್ಟ್ ಬುಧವಾರ ಗಲ್ಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

2017ರಲ್ಲಿ ಪತ್ನಿ ಪಕ್ಕೀರಮ್ಮ ಮತ್ತು ಆಕೆಯ ತಂಗಿ ಗಂಗಮ್ಮ ಹಾಗೂ ತನ್ನ ಮೂರು ಮಕ್ಕಳಾದ ಬಸಮ್ಮ, ನಾಗರಾಜ್, ಪವಿತ್ರ ಅವರನ್ನ ಕೊಚ್ಚಿ ಕೊಲೆಮಾಡಿದ್ದ ಪಾಪಿ ಬೈಲೂರು ತಿಪ್ಪಯ್ಯಗೆ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದೆ.

2017, ಫೆಬ್ರವರಿ 25ರಂದು ರಾತ್ರಿ 8ಗಂಟೆಗೆ ಬಳ್ಳಾರಿ ಜಿಲ್ಲೆ ಕಂಪ್ಲಿ ಪಟ್ಟಣದ ಚಪ್ಪರದಳ್ಳಿಯಲ್ಲಿ ಈ ಘಟನೆ ನಡೆದಿತ್ತು.

ಈ ಸಂಬಂಧ ಕಂಪ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಹೊಸಪೇಟೆಯ ಮೂರನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಂ.ರಾಜಶೇಖರ್ ಅವರು ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿದ್ದಾರೆ.

ಸರ್ಕಾರಿ ಅಭಿಯೋಜಕರಾಗಿ ಎಂ.ಬಿ.ಸುಂಕಣ್ಣ ವಾದ ಮಂಡಿಸಿದ್ದರು.

Stay up to date on all the latest ರಾಜ್ಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp