ಉಪಚುನಾವಣೆ ಕದನ: ಮತದಾನ ಆರಂಭ, ಬಿಜೆಪಿಗೆ ಮಾಡು ಇಲ್ಲವೇ ಮಡಿ ಸಮರ 

ಬಹುನಿರೀಕ್ಷಿತ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಗುರುವಾರ ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಇಂದು ನಡೆಯಲಿರುವ ಈ ಮತದಾನ 13 ಅನರ್ಹ ಶಾಸಕರ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದೆ. ಮತ್ತೊಂದೆಡೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಭವಿಷ್ಯವನ್ನೂ ತೀರ್ಮಾನಿಸಲಿದೆ. 
ಉಪಚುನಾವಣೆ ಸಮರ: ಮತದಾನ ಆರಂಭ, ಬಿಜೆಪಿಗೆ ಮಾಡು ಇಲ್ಲವೇ ಮಡಿ ಸಮರ
ಉಪಚುನಾವಣೆ ಸಮರ: ಮತದಾನ ಆರಂಭ, ಬಿಜೆಪಿಗೆ ಮಾಡು ಇಲ್ಲವೇ ಮಡಿ ಸಮರ

15 ಕ್ಷೇತ್ರಗಳಿಗೆ ಇಂದು ಮತದಾನ: ಯಡಿಯೂರಪ್ಪ ಸರ್ಕಾರದ ಭವಿಷ್ಯ ನಿರ್ಧಾರ


ಬೆಂಗಳೂರು: ಬಹುನಿರೀಕ್ಷಿತ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಗುರುವಾರ ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಇಂದು ನಡೆಯಲಿರುವ ಈ ಮತದಾನ 13 ಅನರ್ಹ ಶಾಸಕರ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದೆ. ಮತ್ತೊಂದೆಡೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಭವಿಷ್ಯವನ್ನೂ ತೀರ್ಮಾನಿಸಲಿದೆ.

ಸ್ಪೀಕರ್ ಹಾಗೂ ಸುಪ್ರೀಂಕೋರ್ಟ್'ನಿಂದ ಅನರ್ಹಗೊಂಡಿರುವ 17 ಪದಚ್ಯುತ ಶಾಸಕರ ಪೈಕಿ 13 ಮಂದಿಯ ಭವಿಷ್ಯ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಬಹುಮತ ನಿರ್ಧರಿಸುವ ಚುನಾವಣೆ ಆರಂಭಗೊಂಡಿದೆ. ಆಡಳಿತ ಮತ್ತು ವಿಪಕ್ಷಗಳ ಪ್ರತಿಷ್ಠೆಯ ಕಣವಾಗಿರುವ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಇಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ. 

ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಉಮೇದುವಾರರೂ ಸೇರಿ ಅಕಾಡದಲ್ಲಿರುವ 165 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಬರೆಯಲಿದ್ದಾರೆ. 

ಮುಕ್ತ ಮತ್ತು ನ್ಯಾಯಸಮ್ಮತದ ಮತದಾನಕ್ಕೆ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಂಡಿರುವುದಾಗಿ ಚುನಾವಣಾ ಆಯೋಗವು ತಿಳಿಸಿದೆ. 15 ಕ್ಷೇತ್ರಗಳಲ್ಲಿ 156 ಪುರುಷರು ಮತ್ತು 9 ಮಹಿಳೆಯರು ಸ್ಪರ್ಧಿಸಿದ್ದಾರೆ. ಶಾಂತಿಯುತ ಚುನಾವಣಾ ಪ್ರಕ್ರಿಯೆ ನಡೆಯಲು 42,509 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಆಯಾ ವಿಧಾನಸಬಾ ಕ್ಷೇತ್ರಗಳ ಮಸ್ಟರಿಂಗ್ ಕೇಂದ್ರಗಳಲ್ಲಿ ಬುಧವಾರ ಸಮಾವೇಶಗೊಂಡಿದ್ದ ಚುನಾವಣಾ ಸಿಬ್ಬಂದಿ ಮತಯಂತ್ರ ಸೇರಿದಂತೆ ಅಗತ್ಯ ಪರಿಕರಗಳೊಂದಿಗೆ ಮತಗಟ್ಟೆಗಳಿಗೆ ತೆರಳಿದ್ದಾರೆ. ಮತದಾನ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಶಾಲೆ-ಕಾಲೇಜು, ಸರ್ಕಾರಿ ನೌಕರರಿಗೆ ಹಾಗೂ ಖಾಸಗಿ ಕಂಪನಿಗಳಿಗೆ ಗುರುವಾರ ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ. 

ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರಿದ್ದು, ಚುನಾವಣಾ ಆಯೋಗದ ಗುರುತಿನ ಚೀಟಿ ಇಲ್ಲದಿದ್ದರೆ, ಪಾಸ್'ಪೋರ್ಟ್, ಚಾಲನಾ ಪರವಾನಗಿ, ಕೇಂದ್ರ ಅಥವಾ ರಾಜ್ಯ ಸರ್ಕಾರ ವಿತರಣೆ ಮಾಡಿರುವ ಗುರುತಿನ ಚೀಟಿ, ಪಾನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ಸೇರಿದಂತೆ 11 ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆ ಕೊಂಡೊಯ್ದು ಮತದಾನ ಮಾಡಬಹುದಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com