ಕೆಂಪೇಗೌಡ ಅಧ್ಯಯನ ಪೀಠ ಕಾಮಗಾರಿಗೆ ನಗರಾಭಿವೃದ್ಧಿ ಇಲಾಖೆ ಅನುಮೋದನೆ 

ನಾಡಪ್ರಭು ಕೆಂಪೇಗೌಡ ಅಧ್ಯಯನ ಪೀಠ ಮತ್ತು ಸಂಶೋಧನಾ ಕೇಂದ್ರದ ಕಾಮಗಾರಿಗೆ ನಗರಾಭಿವೃದ್ಧಿ ಇಲಾಖೆ ಗುರುವಾರ ಷರತ್ತುಬದ್ಧ ಅನುಮೋದನೆ ನೀಡಿದೆ.
ಕೆಂಪೇಗೌಡ ಪ್ರತಿಮೆ
ಕೆಂಪೇಗೌಡ ಪ್ರತಿಮೆ

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಅಧ್ಯಯನ ಪೀಠ ಮತ್ತು ಸಂಶೋಧನಾ ಕೇಂದ್ರದ ಕಾಮಗಾರಿಗೆ ನಗರಾಭಿವೃದ್ಧಿ ಇಲಾಖೆ ಗುರುವಾರ ಷರತ್ತುಬದ್ಧ ಅನುಮೋದನೆ ನೀಡಿದೆ.

ರಾಜರಾಜೇಶ್ವರಿ ನಗರ ವಲಯದಲ್ಲಿ ತನ್ನದ್ ಅನುದಾನದ ಹಣದಲ್ಲಿ ಕೆಂಪೇಗೌ ವಿಶ್ವ ವಿದ್ಯಾನಿಲಯ ಸ್ಥಾಪಿಸುವುದಾಗಿ ಬಿಬಿಎಂಪಿ ಸ್ಪಷ್ಟಪಡಿಸಿದೆ.

ಈ ಹಿಂದೆ ಬಜೆಟ್ ನಲ್ಲಿ ಹಣದ ಕೊರತೆಯಿರುವ ಕಾರಣ ಕೆಂಪೇಗೌಡ ವಿವಿ ಸ್ಥಾಪಿಸಲು  ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರು, ಆದರೆ ಇದಕ್ಕೆ ವ್ಯಾಪಕ ವಿರೋಧ , ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ  ₹50 ಕೋಟಿ ವೆಚ್ಚದಲ್ಲಿ ನಿರ್ಮಿಸಲು ತೀರ್ಮಾನಿಸಿದೆ. 

ಕಾಮಗಾರಿಯನ್ನು ಕಡ್ಡಾಯವಾಗಿ ಬಿಬಿಎಂಪಿ ಅನುದಾನದಲ್ಲೇ ಕೈಗೆತ್ತಿಕೊಳ್ಳಬೇಕು. ಈ ಯೋಜನೆಗೆ ತಗಲುವ ವೆಚ್ಚವನ್ನು ಬಿಬಿಎಂಪಿಯು ಮುಂದಿನ ಸಾಲಿನ ಬಜೆಟ್‌ನಲ್ಲಿ ಮೀಸಲಿಡಬೇಕು. ಕಾಮಗಾರಿಯನ್ನು ಕೆಟಿಪಿಪಿ ಕಾಯ್ದೆ/ನಿಯಮಗಳಿಗೆ ಅನುಸಾರವಾಗಿಯೇ ಅನುಷ್ಠಾನಗೊಳಿಸಬೇಕು ಎಂದು  ನಗರಾಭಿವೃದ್ಧಿ ಇಲಾಖೆ ಷರತ್ತು ವಿಧಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com