ಪೊಕ್ಸೊ ಪ್ರಕರಣದಲ್ಲಿ ಅತ್ಯಾಚಾರ ಆರೋಪಿಗೆ 10 ವರ್ಷ ಜೈಲು ಶಿಕ್ಷೆ

 17 ವರ್ಷದ ಹುಡುಗಿ ಮೇಲೆ ಅತ್ಯಾಚಾರವೆಸಗಿದ 28 ವರ್ಷದ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 5 ಸಾವಿರ ದಂಡವನ್ನು ವಿಧಿಸಿ ನಗರದ ಮಕ್ಕಳ ಸ್ನೇಹಿ ನ್ಯಾಯಾಲಯವೊಂದರ ನ್ಯಾಯಾಧೀಶೆ ಆರ್ . ಶಾರದಾ ಆದೇಶ ಹೊರಡಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು:  17 ವರ್ಷದ ಹುಡುಗಿ ಮೇಲೆ ಅತ್ಯಾಚಾರವೆಸಗಿದ 28 ವರ್ಷದ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 5 ಸಾವಿರ ದಂಡವನ್ನು ವಿಧಿಸಿ ನಗರದ ಮಕ್ಕಳ ಸ್ನೇಹಿ ನ್ಯಾಯಾಲಯವೊಂದರ ನ್ಯಾಯಾಧೀಶೆ ಆರ್ . ಶಾರದಾ ಆದೇಶ ಹೊರಡಿಸಿದ್ದಾರೆ.

ಮೂಲತ: ಮಂಡ್ಯದಿಂದ ಬಂದು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ವಾಸಿಸುತ್ತಿದ್ದ ಹೆಚ್. ಎಸ್. ಮಹೇಶ್ ಶಿಕ್ಷೆಗೊಳಗಾಗದ ಆರೋಪಿಯಾಗಿದ್ದಾನೆ. 

2014 ಏಪ್ರಿಲ್ 24 ರಂದು ಅತ್ಯಾಚಾರ ಘಟನೆ ನಡೆದಿತ್ತು. ಸೊಳ್ಳೆ ಪರದೆ ತಯಾರಿಕಾ ಕಂಪನಿಯಲ್ಲಿ ತನ್ನೊಂದಿಗೆ ಕೆಲಸ ಮಾಡುತ್ತಿದ್ದ ಮಹೇಶ್ ತನ್ನ ಮಗಳ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ ದೂರು ದಾಖಲಿಸಿದ್ದಳು.

ಏಪ್ರಿಲ್ 24 ರಂದು  ಸಂತ್ರಸ್ಥೆಯ ತಾಯಿ ಕೆಲಸಕ್ಕೆ ಹೋಗಿದ್ದಾಗ ಮನೆ  ಹತ್ತಿರ ಬಂದ ಆರೋಪಿ ಮಹೇಶ್ , ಸಂತ್ರಸ್ತೆಯನ್ನು ನೆರೆಯ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಿದ್ದ. ಅಲ್ಲದೇ, ಇದನ್ನು ಯಾರಿಗೂ ಹೇಳದಂತೆ ಬೆದರಿಕೆ ವೊಡ್ಡಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. 

ಮೇ 5, 2014ರಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗದ ಬಂಧನಕ್ಕೆ ಒಪ್ಪಿಸಲಾಗಿತ್ತು. ತನಿಖೆ ನಂತರ ಐಪಿಸಿ ಹಾಗೂ ಪೊಕ್ಸೊ ಕಾಯ್ದೆಯಡಿ ಕಾಮಾಕ್ಷಿಪಾಳ್ಯ ಪೊಲೀಸರು ಆರೋಪಿ ವಿರುದ್ಧ ಜಾರ್ಜ್ ಶೀಟ್ ದಾಲಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com