ಬೆಂಗಳೂರು:  ಕಾಂಗ್ರೆಸ್ ಕಾರ್ಯಕರ್ತರನ ಮೇಲೆ ತಲವಾರು ದಾಳಿ

ಚಿಕ್ಕಪೇಟೆ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ರಿಯಾಜ್ ಸೋಮೇಶ್ವರ ಎಂಬವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ಸಿದ್ದಾಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು :ಚಿಕ್ಕಪೇಟೆ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ರಿಯಾಜ್ ಸೋಮೇಶ್ವರ ಎಂಬವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ಸಿದ್ದಾಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದು, ರಿಯಾಜ್ ಅವರ ತಲೆಯ ಭಾಗಕ್ಕೆ ಗಂಭೀರವಾಗಿ ಗಾಯಗಳಾಗಿದ್ದು, ಅವರನ್ನು ವಿಲ್ಸನ್‌ಗಾರ್ಡನ್‌ನ ಅಭಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಸಿದ್ದಾಪುರದ ಸಯ್ಯದ್ ರಿಯಾಜ್ ಉಪಚುನಾವಣೆಯಲ್ಲಿ ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ರಿಜ್ವಾನ್ ಪರ ಕೆಲಸ ಮಾಡಿ ಫಲಿತಾಂಶದ ಬಳಿಕ ಸಿದ್ದಾಪುರದ ಕಚೇರಿಗೆ ಬಂದಿದ್ದರು. ರಿಜ್ವಾನ್ ಜಯದ ಸಂಭ್ರಮಾಚರಣೆ ಹುಡುಗರ ಬಳಿ ಹಂಚಿಕೊಳ್ಳಲು ರಿಯಾಜ್ ಸಿದ್ಧತೆ ಮಾಡಿಕೊಳ್ಳಲು ಮುಂದಾಗಿದ್ದರು. ಈ ವೇಳೆ ಡಿಯೋ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ರಿಯಾಜ್ ಮೇಲೆ ಮಚ್ಚು-ಲಾಂಗುಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಪ್ರಕರಣ ದಾಖಲಿಸಿರುವ ಸಿದ್ದಾಪುರ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com