ಬೆಂಗಳೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಗಡ್ಕರಿ: ಕಾಮಗಾರಿ ತ್ವರಿತಗೊಳಿಸಲು ಸೂಚನೆ

ಕೇಂದ್ರ ಭೂಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಮತ್ತು ಎಂ ಎಸ್ಎಂಇ ಸಚಿವ ನಿತಿನ್ ಗಡ್ಕರಿ ಅವರು ಮಂಗಳವಾರ ಬೆಂಗಳೂರಿನಲ್ಲಿ ರಾಜ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಸಭೆಯಲ್ಲಿ ನಿತಿನ್ ಗಡ್ಕರಿ ಹಾಗೂ ಸಿಎಂ ಯಡಿಯೂರಪ್ಪ
ಸಭೆಯಲ್ಲಿ ನಿತಿನ್ ಗಡ್ಕರಿ ಹಾಗೂ ಸಿಎಂ ಯಡಿಯೂರಪ್ಪ

ಬೆಂಗಳೂರು: ಕೇಂದ್ರ ಭೂಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಮತ್ತು ಎಂ ಎಸ್ಎಂಇ ಸಚಿವ ನಿತಿನ್ ಗಡ್ಕರಿ ಅವರು ಮಂಗಳವಾರ ಬೆಂಗಳೂರಿನಲ್ಲಿ ರಾಜ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ಗಡ್ಕರಿ, ಈಗಾಗಲೇ ಚಾಲ್ತಿಯಲ್ಲಿರುವ ಕಾಮಗಾರಿಗಳನ್ನು ಆದಷ್ಟು ಬೇಗ ಮುಗಿಸುವಂತೆ ಕಂಟ್ರಾಕ್ಟರ್ ಗಳಿಗೆ ಸೂಚಿಸಿದರು.

ಹೊಸ ಮಾರ್ಗಗಳಿಗೆ ಸಂಬಂಧಿಸಿದಂತೆ ಭೂಮಿ‌ ಲಭ್ಯತೆ ಹಾಗೂ ಸ್ವಾಧೀನ ಪ್ರಕ್ರಿಯೆ ಬಗ್ಗೆ ಚರ್ಚೆ ನಡೆಸಲಾಯಿತು. ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಲು ನಿವೃತ್ತ ಅಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ‌ ಮಾಡಿಕೊಂಡು ಭೂಸ್ವಾದೀನ ಪ್ರಕ್ರಿಯೆಯನ್ನು  ಆದಷ್ಟು ಬೇಗ ಮುಗಿಸಲು ಸೂಚಿಸಲಾಯಿತು.

ಇದೇ ಸಂದರ್ಭದಲ್ಲಿ ಕೆಲ ಅಧಿಕಾರಿಗಳು ಹಿಂದಿನ ಸರ್ಕಾರ ಇದ್ದ ವೇಳೆ ಕಾಮಗಾರಿ ವೇಗವಾಗಿ ನಡೆದಿರಲಿಲ್ಲ ಎಂದು ದೂರಿದರು. ಇದಕ್ಕೆ ಗರಂ ಆದ ಕೇಂದ್ರ ಸಚಿವರು, ಈಗ ಯಡಿಯೂರಪ್ಪ ಅವರ ಸರ್ಕಾರ ಅಧಿಕಾರದಲ್ಲಿದೆ. ಈಗ ಕಾರಣ ಕೇಳದೆ 1500 ಕಿಲೋಮೀಟರ್ ಹೆದ್ದಾರಿ ಪೂರ್ಣಗೊಳಿಸಿ ಆದಷ್ಟು ಬೇಗ ಹಸ್ತಾಂತರಿಸಿ ಎಂದು ಸೂಚಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಉಪ ಮುಖ್ಯಮಂತ್ರಿ ಗೋವಿಂದ್ ಕಾರಜೋಳ ಹಾಗೂ ಸಚಿವ ಜಗದೀಶ್ ಶೆಟ್ಟರ್ ಅವರು, ಹುಬ್ಬಳಿ- ಸೊಲ್ಲಾಪರ ಮಾರ್ಗದಲ್ಲಿ ವಾಹನಗಳ ಸಂಚಾರ ಅಧಿಕ ಪ್ರಮಾಣದಲ್ಲಿದ್ದು, ಈ ಮಾರ್ಗವನ್ನು ಚತುಷ್ಪಥ ರಸ್ತೆಯನ್ನಾಗಿ ನಿರ್ಮಿಸಿದರೆ ಸುಗಮ ಸಂಚಾರ ಹಾಗೂ ಅಂತರ್ ರಾಜ್ಯ ಸಂಪರ್ಕಕ್ಕೆ ಅನುಕೂಲವಾಗುತ್ತದೆ. ಈ ಮಾರ್ಗವು ಪ್ರಮುಖ ಮಾರ್ಗವಾಗಿದ್ದು, ಈ ಹೆದ್ದಾರಿಯನ್ನು ಚತುಷ್ಪಥ ಹೆದ್ದಾರಿಗೆ ಮೇಲ್ದರ್ಜೆಗೇರಿಸುವ ಬಗ್ಗೆ ಹೆದ್ದಾರಿ ಸಚಿವರಿಗೆ ಮನವರಿಕೆ ಮಾಡಿಕೊಡಲಾಯಿತು.

ಕೂಡಲೇ ಕೇಂದ್ರ ಹೆದ್ದಾರಿ ಸಚಿವ ಗಡ್ಕರಿ ಅವರು ಇದಕ್ಕೆ ತಾತ್ವಿಕ ಒಪ್ಪಿಗೆ ನೀಡಿ, ಈ ಚತುಷ್ಪಥ ಹೆದ್ದಾರಿ ಕಾಮಗಾರಿ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆಗೆ ಕ್ರಮಕೈಗೊಳ್ಳುವಂತೆ ಸೂಚಿಸಿರುವುದಾಗಿ ಉಪ ಮುಖ್ಯಮಂತ್ರಿ ಗೋವಿಂದ್ ಕಾರಜೋಳ ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com