ಬೆಂಗಳೂರು: ವೇಶ್ಯವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ, ನಾಲ್ವರ ರಕ್ಷಣೆ

ಮಸಾಜ್ ಪಾರ್ಲರ್ ನಲ್ಲಿ ವೇಶ್ಯವಾಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಓರ್ವ ಮಹಿಳೆಯನ್ನು ಬಂಧಿಸಿ, ನಾಲ್ವರು ಮಹಿಳೆಯರನ್ನು ಸಿಸಿಬಿ ಪೊಲೀಸರು ರಕ್ಷಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮಸಾಜ್ ಪಾರ್ಲರ್ ನಲ್ಲಿ ವೇಶ್ಯವಾಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಓರ್ವ ಮಹಿಳೆಯನ್ನು ಬಂಧಿಸಿ, ನಾಲ್ವರು ಮಹಿಳೆಯರನ್ನು ಸಿಸಿಬಿ ಪೊಲೀಸರು ರಕ್ಷಿಸಿದ್ದಾರೆ.

ವಿ3ಎ ಸಲೂನ್ ಆ್ಯಂಡ್ ಸ್ಪಾ ನಲ್ಲಿ ಕಾನೂನು ಬಾಹಿರವಾಗಿ ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದ ಮ್ಯಾನೇಜರ್ ಪ್ರೀತಿ ಡೇ(35) ಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಾಳಿಯ ಸಂದರ್ಭದಲ್ಲಿ ಅನುಷಾ ದೇಂಗ್ರೆ ಮತ್ತು ಮ್ಯಾನೇಜರ್ ಪ್ರೀತಿ ಡೇ ಅವರು ಹಣ ಕೊಡಿಸುವುದಾಗಿ ಪುಸಲಾಯಿಸಿ ಮಾನವ ಕಳ್ಳಸಾಗಾಣಿಕೆ ಮಾಡುತ್ತಿದ್ದರು. ಜತೆಗೆ ತಮ್ಮ ಸಲೂನ್ ನಲ್ಲಿ ಗಿರಾಕಿಗಳಿಂದ ಹಣ ಪಡೆದು ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದರು ಎಂಬುದು ತನಿಖೆ ವೇಳೆ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಲೀಲಾವತಿ, ಶ್ರೀದೇವಿ, ಶೋಬಿತಾ, ದಿವ್ಯಾ ಎಂಬ ಮಹಿಳೆಯರನ್ನು ಸಿಸಿಬಿ ಪೊಲೀಸರು ರಕ್ಷಿಸಿದ್ದಾರೆ. 

ದಾಳಿ ಸಂದರ್ಭದಲ್ಲಿ ಸಲೂನ್ ಮಾಲೀಕೆಯಾದ ಅನುಷಾ ದೇಂಗ್ರೆ ತಲೆಮರಿಸಿಕೊಂಡಿದ್ದು, ಬಂಧಿತ ಪ್ರೀತಿ ಡೇ ಅವರಿಂದ 7,000  ನಗದು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಸಿಸಿಬಿ ವಿಶೇಷ ವಿಚಾರಣಾ ದಳದ ಸಹಾಯಕ ಪೊಲೀಸ್ ಆಯುಕ್ತ ವಿರೂಪಾಕ್ಷಪ್ಪ ಡಿ ಟಿ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com