ಎಚ್ .ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್:  ಮೂರು ಕೇಸ್ ರದ್ದುಗೊಳಿಸಿದ ಹೈಕೋರ್ಟ್ 

2014ರ ಲೋಕಸಭಾ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು ರಸ್ತೆ ಬಂದ್‌ ಮಾಡಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯುಂಟು ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧದ ಮೂರು ಪ್ರತ್ಯೇಕ ಕ್ರಿಮಿನಲ್‌ ಪ್ರಕರಣಗಳನ್ನು ಹೈಕೋರ್ಟ್‌ ರದ್ದುಗೊಳಿಸಿದೆ.
ಕುಮಾರಸ್ವಾಮಿ
ಕುಮಾರಸ್ವಾಮಿ

ಬೆಂಗಳೂರು:  2014ರ ಲೋಕಸಭಾ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು ರಸ್ತೆ ಬಂದ್‌ ಮಾಡಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯುಂಟು ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧದ ಮೂರು ಪ್ರತ್ಯೇಕ ಕ್ರಿಮಿನಲ್‌ ಪ್ರಕರಣಗಳನ್ನು ಹೈಕೋರ್ಟ್‌ ರದ್ದುಗೊಳಿಸಿದೆ.

ನನ್ನ ವಿರುದ್ಧ ಚಿಕ್ಕಬಳ್ಳಾಪುರ ಪ್ರಧಾನ ಸಿವಿಲ್‌ ನ್ಯಾಯಾಲಯದಲ್ಲಿ ಭಾರತೀಯ ದಂಡ ಸಂಹಿತೆ–1860ರ ಕಲಂ 188 ಮತ್ತು 341ರ ಅಡಿಯಲ್ಲಿ ದಾಖಲಾಗಿರುವ ಪ್ರಕರಣಗಳ ವಿಚಾರಣೆ ರದ್ದುಗೊಳಿಸಬೇಕು ಎಂದು ಕೋರಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಾನ್ಯ ಮಾಡಿದೆ.

ಐಪಿಸಿ ಸೆಕ್ಷನ್ 188 ಮತ್ತು 341ರ ಅಡಿಯಲ್ಲಿ ಕುಮಾರಸ್ವಾಮಿ ವಿರುದ್ಧ  ಚಿಕ್ಕಾಬಳ್ಳಾಪುರದ ಉಪ ನಿರ್ದೇಶಕ ಎಸ್ ಸ್ ಅಬಿದ್ ದೂರು ಸಲ್ಲಿಸಿದ್ದರು.

ಅರ್ಜಿದಾರರ ವಿರುದ್ಧ ವೈಯಕ್ತಿಕ ಹಾಗೂ ನಿರ್ದಿಷ್ಟ ಆರೋಪಗಳಿಲ್ಲ. ಹೀಗಾಗಿ ಅಧೀನ ನ್ಯಾಯಾಲಯ ಅವರ ವಿರುದ್ಧದ ಆರೋಪಗಳನ್ನು ಸಂಜ್ಞೇಯ ಅಪರಾಧ ಎಂದು ವಿಚಾರಣೆಗೆ ಪರಿಗಣಿಸಿರುವುದು ಕಾನೂನು ಬಾಹಿರ’ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ, ಕುಮಾರಸ್ವಾಮಿ ವಿರುದ್ಧ ಚುನಾ ವಣಾ ಅಧಿಕಾರಿಗಳು ದಾಖಲಿಸಿದ್ದ ದೂರು ಗಳನ್ನು ರದ್ದುಗೊಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com