ಬೆಂಗಳೂರು: ಸೋಮವಾರದಿಂದ ಕಸ್ತೂರಬಾ ರಸ್ತೆಯಲ್ಲಿ ಸ್ಮಾರ್ಟ್‌ ಪಾರ್ಕಿಂಗ್ ವ್ಯವಸ್ಥೆ ಜಾರಿ

ಬಿಬಿಎಂಪಿಯು ಕಸ್ತೂರಬಾ ರಸ್ತೆಯಲ್ಲಿ ಪ್ರಾಯೋಗಿಕವಾಗಿ ಶುಲ್ಕ ಪಾವತಿಸಿ ವಾಹನ ನಿಲುಗಡೆ ಮಾಡುವ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆಯನ್ನು ಸೋಮವಾರದಿಂದ ಜಾರಿಗೆ ತರಲಾಗುತ್ತಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಬಿಬಿಎಂಪಿಯು ಕಸ್ತೂರಬಾ ರಸ್ತೆಯಲ್ಲಿ ಪ್ರಾಯೋಗಿಕವಾಗಿ ಶುಲ್ಕ ಪಾವತಿಸಿ ವಾಹನ ನಿಲುಗಡೆ ಮಾಡುವ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆಯನ್ನು ಸೋಮವಾರದಿಂದ ಜಾರಿಗೆ ತರಲಾಗುತ್ತಿದೆ.

ಸಂಪೂರ್ಣ ತಂತ್ರಜ್ಞಾನ ಆಧಾರಿತ ನಿರ್ವಹಣೆ, ಸೆನ್ಸಾರ್ ಆಧಾರಿತ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ವಿಶೇಷವಾಗಿ ವಿಕಲ ಚೇತನರಿಗಾಗಿ ಕೆಲವು ಅಂಕಣಗಳನ್ನು ಮೀಸಲಿಡಲಾಗಿದೆ.

ಈ ಸೌಲಭ್ಯದ ಮೇಲ್ವಿಚಾರಣೆ ಮಾಡಲು ಗಸ್ತು ವಾಹನವನ್ನು ನಿಯೋಜಿಸಲಾಗಿದೆ. ಅಲ್ಲದೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಯಾವುದೇ ರೀತಿಯಲ್ಲಿ ವಾಹನಗಳಿಗೆ ಹಾನಿಯುಂಟಾಗುವುದನ್ನು ತಡೆಯಬಹು ಎಂದು ಬಿಬಿಎಂಪಿ ಆಯುಕ್ತರು ತಿಳಿಸಿದ್ದಾರೆ.

ಸ್ಮಾರ್ಟ್‌ ಪಾರ್ಕಿಂಗ್‌ ನಗರದ ಕೇಂದ್ರ ವಾಣಿಜ್ಯ ಪ್ರದೇಶಗಳಲ್ಲಿ(ಸಿಬಿಡಿ) ವಾಹನಗಳನ್ನು ಅಡ್ಡಾದಿಡ್ಡಿ ನಿಲ್ಲಿಸುವುದರಿಂದ ಉಂಟಾಗುತ್ತಿರುವ ವಾಹನ ದಟ್ಟಣೆ ಕಡಿಮೆ ಮಾಡುವ ಉದ್ದೇಶವನ್ನು ಹೊಂದಿದೆ. ಬಿಲ್ಡಿಂಗ್‌ ಕಂಟ್ರೋಲ್‌ ಸಲ್ಯೂಷನ್ಸ್‌ ಇಂಡಿಯಾ ಕಂಪೆನಿ ಗುತ್ತಿಗೆ ಪಡೆದಿದ್ದು, ಈ ಕಂಪನಿ ಪ್ರತಿವರ್ಷ 31.60 ಕೋಟಿ ಪಾಲಿಕೆಗೆ ನೀಡಬೇಕು. ಇದರಿಂದ ಮುಂದಿನ 10 ವರ್ಷಗಳಲ್ಲಿ ಬಿಬಿಎಂಪಿಯು 397.46 ಕೋಟಿ ಆದಾಯ ಪಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com