ಪೌರತ್ವ ತಿದ್ದುಪಡಿ ಮಸೂದೆ: ರಾಜ್ಯದಲ್ಲೂ ಭುಗಿಲೆದ್ದ ಪ್ರತಿಭಟನೆ

ಮಹತ್ವದ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ಕೇಂದ್ರ ಸರ್ಕಾರಕ್ಕೆ ಹಲವೆಡೆ ತೀವ್ರ ವಿರೋಧಗಳು ವ್ಯಕ್ತವಾಗುತ್ತಿದ್ದು, ಈ ನಡುವಲ್ಲೇ ರಾಜ್ಯದಲ್ಲೂ ಕೂಡ ಪ್ರತಿಭಟನೆ ಭುಗಿಲೆದ್ದಿದೆ. 
ಪೌರತ್ವ ತಿದ್ದುಪಡಿ ಮಸೂದೆ: ರಾಜ್ಯದಲ್ಲೂ ಭುಗಿಲೆದ್ದ ಪ್ರತಿಭಟನೆ
ಪೌರತ್ವ ತಿದ್ದುಪಡಿ ಮಸೂದೆ: ರಾಜ್ಯದಲ್ಲೂ ಭುಗಿಲೆದ್ದ ಪ್ರತಿಭಟನೆ

ಬೆಂಗಳೂರು: ಮಹತ್ವದ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ಕೇಂದ್ರ ಸರ್ಕಾರಕ್ಕೆ ಹಲವೆಡೆ ತೀವ್ರ ವಿರೋಧಗಳು ವ್ಯಕ್ತವಾಗುತ್ತಿದ್ದು, ಈ ನಡುವಲ್ಲೇ ರಾಜ್ಯದಲ್ಲೂ ಕೂಡ ಪ್ರತಿಭಟನೆ ಭುಗಿಲೆದ್ದಿದೆ. 

ತಿದ್ದುಪಡಿ ಮಸೂದೆಗೆ ಹಲವು ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಸಾವಿರಾರು ಜನರು ಶುಕ್ರವಾರ ರಾಜ್ಯದ ಹಲವೆಡೆ ಬೀದಿಗಿಳಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. 

ಮುಸ್ಲಿಂ ಮುತ್ತಹಿದ ಮಹಾಜ್ ನೇತೃತ್ವದಲ್ಲಿ ನಿನ್ನೆ ಶಿವಮೊಗ್ಗದಲ್ಲಿ ಮಸೂದೆ ವಿರುದ್ಧ ಪ್ರತಿಭಟನೆ ನಡೆಯಿತು. ಮುಸ್ಲಿಂ ಅಲ್ಪ ಸಂಖ್ಯಾತರನ್ನು ಶೋಷಿಸಲು ಈ ಕಾಯ್ದೆ ಅಸ್ತ್ರವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಅಲ್ಲದೆ, ಮಸೂದೆಗೆ ಒಪ್ಪಿಗೆ ಸೂಚಿಸದಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೂ ಮನವಿ ಸಲ್ಲಿಸಿದ್ದಾರೆ. 

ಜಿಲ್ಲಾಧಿಕಾರಿಗಳ ಕಚೇರಿ ಬಳಿ ಬಂದ ನೂರಾರು ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಘೋಷಣಾ ವಾಕ್ಯಗಳನ್ನೂ ಕೂಗಿದರು. 

ತಿದ್ದುಪಡಿ ಕಾಯ್ದೆಯು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳಿಗೆ ವಿರುದ್ಧವಾಗಿದೆ. ಜಾತ್ಯಾತೀತ ಮೌಲ್ಯಗಳಿಗೂ ಇದು ವಿರುದ್ಧವಾಗಿದೆ. ಸಂವಿಧಾನದ 14ನೇ ವಿಧಿಯನ್ನು ಉಲ್ಲಂಘನೆ ಮಾಡಿದಂತಾಗುತ್ತದೆ ಸಂಘಟನೆಯ ಜಿಲ್ಲಾಧ್ಯಕ್ಷ ಪರ್ವೇಜ್ ಅಹ್ಮದ್ ಹೇಳಿದ್ದಾರೆ. 

ಇದರಂತೆ ಕಲಬುರಗಿ, ಉಡುಪಿ, ಮಡಿಕೇರಿ, ಬೀದರ್, ಚಿಂತಾಮಣಿ ಸೇರಿದಂತೆ ರಾಜ್ಯದ ಹಲವೆಡೆ ಕೂಡ ಪ್ರತಿಭಟನೆಗಳು ಶುಕ್ರವಾರ ಭುಗಿಲೆದ್ದಿದ್ದವು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com