ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಮುಖ್ಯಮಂತ್ರಿ ಚರ್ಚೆ: ನದಿ ಜೋಡಣೆ ಪ್ರಕ್ರಿಯೆಗೆ ಶೀಘ್ರ ಚಾಲನೆ!

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಂಗಳೂರಿಗೆ ಆಗಮಿಸಿದ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಕರ್ನಾಟಕಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಮುಖ್ಯಮಂತ್ರಿ ಚರ್ಚೆ: ನದಿ ಜೋಡಣೆ ಪ್ರಕ್ರಿಯೆಗೆ ಶೀಘ್ರ ಚಾಲನೆ!
ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಮುಖ್ಯಮಂತ್ರಿ ಚರ್ಚೆ: ನದಿ ಜೋಡಣೆ ಪ್ರಕ್ರಿಯೆಗೆ ಶೀಘ್ರ ಚಾಲನೆ!

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಂಗಳೂರಿಗೆ ಆಗಮಿಸಿದ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಕರ್ನಾಟಕಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪ್ರಸ್ತಾಪಿಸಿದ 5 ಪ್ರಮುಖ ವಿಷಯಗಳ ಕುರಿತು ಸಹಮತಿ ವ್ಯಕ್ತಪಡಿಸಿದ್ದಲ್ಲದೆ, ಶೀಘ್ರವೇ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು.

ಕೃಷ್ಣಾ, ಕಾವೇರಿ, ಗೋದಾವರಿ ಮತ್ತು ಪೆನ್ನಾರ್ ನದಿಗಳ ಜಲಾನಯನ ಪ್ರದೇಶಗಳಲ್ಲಿನ ನದಿಗಳ ಜೋಡಣೆಯಿಂದ ನೀರಿನ ಲಭ್ಯತೆಯನ್ನು ವೃದ್ಧಿಸುವ ರಾಜ್ಯದ ಪ್ರಮುಖ ಬೇಡಿಕೆಗೆ ಸಹಮತಿ ವ್ಯಕ್ತಪಡಿಸಿದ ಸಚಿವರು, ಇದು ಪ್ರಧಾನಿ ನರೇಂದ್ರ ಮೋದಿಯವರಿಗೂ ಆದ್ಯತೆಯ ವಿಷಯವಾಗಿದ್ದು, ನದಿ ಜೋಡಣೆಯ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಪಿಎಂಕೆಎಸ್ ವೈ ಯೋಜನೆಯಡಿ ರಾಜ್ಯ ಕೈಗೆತ್ತಿಕೊಂಡಿರುವ ತುಂಗಾ ಮೇಲ್ದಂಡೆ, ಭೀಮಾ ಏತ ನೀರಾವತಿ, ಕಾರಂಜಾ, ಶ್ರೀ ರಾಮೇಶ್ವರ ತ ನೀರಾವರಿ ಮತ್ತು ನಾರಾಯಣಪುರ ಎಡದಂಡೆ ಕಾಲುವೆ ಯೋಜನೆಗಳೂ ಸೇರಿದಂತೆ ವಿವಿಧ ಯೋಜನೆಗಳಿಗೆ 439 ಕೋಟಿ ರೂ.. ಗಳನ್ನು ಶೀಘ್ರವೇ ಬಿಡುಗಡೆ ಮಾಡುವುದಾಗಿ ಕೇಂದ್ರ ಸಚಿವ ಶೇಖಾವತ್ ಅವರು ತಿಳಿಸಿದರು.

ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸುವ ಮೇಕೆದಾಟು ಯೋಜನೆಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು. ಈ ಯೋಜನೆಯ ಅನುಮೋದನೆಗೆ ಯಾವುದೇ ಕಾನೂನು ತೊಡಕು ಇರುವುದಿಲ್ಲ ಎಂದು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮಹದಾಯಿ ಮತ್ತು ಕೃಷ್ಣ ನದಿ ವಿವಾದ ನ್ಯಾಯಾಧಿಕರಣದ ನೀರು ಹಂಚಿಕೆಯ ಕುರಿತು ಗಜೆಟ್ ಅಧಿಸೂಚನೆ ಹೊರಡಿಸುವಂತೆಯೂ ಮನವಿ ಮಾಡಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com