ಸ್ಥಳೀಯರಿಗೆ ಉದ್ಯೋಗ ಕೋಟಾ ಕಡ್ಡಾಯಗೊಳಿಸಲು ಸಾಧ್ಯವಿಲ್ಲ- ಡಾ. ಅಶ್ವಥ್ ನಾರಾಯಣ

ಡಾ. ಸರೋಜಿನಿ ಮಹಿಷಿ ಆಯೋಗದ ವರದಿಯಂತೆ  ಸಿ ಮತ್ತು ಡಿ ದರ್ಜೆ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ 80  ಉದ್ಯೋಗ ಮೀಸಲು ಕಡ್ಡಾಯವಾಗಿದೆ. ಆದರೆ, ಎ ಮತ್ತು ಬಿ ದರ್ಜೆಯಲ್ಲಿ ಇದನ್ನು ಕಡ್ಡಾಯ ಮಾಡುವುದು ಸವಾಲಿನ ವಿಷಯವಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ಹೇಳಿದ್ದಾರೆ
ಡಾ.ಅಶ್ವಥ್ ನಾರಾಯಣ
ಡಾ.ಅಶ್ವಥ್ ನಾರಾಯಣ

ಬೆಂಗಳೂರು:  ಡಾ. ಸರೋಜಿನಿ ಮಹಿಷಿ ಆಯೋಗದ ವರದಿಯಂತೆ  ಸಿ ಮತ್ತು ಡಿ ದರ್ಜೆ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ 80  ಉದ್ಯೋಗ ಮೀಸಲು ಕಡ್ಡಾಯವಾಗಿದೆ. ಆದರೆ, ಎ ಮತ್ತು ಬಿ ದರ್ಜೆಯಲ್ಲಿ ಇದನ್ನು ಕಡ್ಡಾಯ ಮಾಡುವುದು ಸವಾಲಿನ ವಿಷಯವಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ಹೇಳಿದ್ದಾರೆ

ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಕನ್ನಡ ಸಂಘಟನೆಗಳ ಒಕ್ಕೂಟ ನಗರದಲ್ಲಿ ನಡೆಸುತ್ತಿರುವ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಯುವ ಜನಾಂಗ ಉದ್ಯೋಗ ಪಡೆಯಲು ಅಗತ್ಯವಾದ ಕೌಶಲ್ಯಾಭಿವೃದ್ದಿ ಕಡೆಗೆ ಸರ್ಕಾರ ಗಮನ ಹರಿಸಿದೆ ಎಂದರು. 

ಎಲ್ಲಾ ಪಾಲುದಾರರನ್ನು ಒಂದೇ ವೇದಿಕೆಯಲ್ಲಿ ತರಲು ಸರ್ಕಾರ ಯೋಜಿಸುತ್ತಿದೆ, ಅಲ್ಲಿ ಪದವೀಧರರಿಗೆ ಅಥವಾ ಪದವಿ ಪಡೆಯಲು ಬಯಸುವವರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲಾಗುವುದು. ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಸೂಕ್ತವಾದ ಉದ್ಯೋಗವನ್ನು ಪಡೆಯಲು ಸಹಾಯ ಮಾಡಲು ಕೌಶಲ್ಯ ಅಭಿವೃದ್ಧಿ ನೀಡಲು ಕ್ರಮಗಳನ್ನು ತೆಗೆದುಕೊಳ್ಳುತ್ತವೆ ಎಂದು ತಿಳಿಸಿದರು. 

ರಾಜ್ಯವನ್ನು  ಶಿಕ್ಷಣ ತಾಣವನ್ನಾಗಿ ಮಾಡುವ ಯೋಜನೆಗಳಿವೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ ಅವರು, ಈ ಮೊದಲು ನಾವು ನೆರೆಯ ರಾಜ್ಯಗಳಿಂದ ಮತ್ತು ಉತ್ತರ ಭಾರತದಿಂದಲೂ ಜನರನ್ನು ಪಡೆಯುತ್ತಿದ್ದೆವು. ಈಗ, ಸಂಖ್ಯೆ ಕಡಿಮೆಯಾಗಿದೆ. ಉದ್ಯೋಗ ಪಡೆಯಲು ತರಬೇತಿ ಪಡೆಯಬಹುದಾದ ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆಯನ್ನು ಒದಗಿಸುವ ಮೂಲಕ, ಹೊರಗಿನಿಂದಲೂ ಹೆಚ್ಚಿನ ವಿದ್ಯಾರ್ಥಿಗಳನ್ನು ಆಕರ್ಷಿಸಲು ಬಯಸುವುದಾಗಿ ಅವರು ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com