ಮೇಕೆದಾಟು ಯೋಜನೆಗೆ ಶೀಘ್ರಗತಿಯಲ್ಲಿ ಕೇಂದ್ರ ಒಪ್ಪಿಗೆ ನೀಡಲಿ: ಸಿಎಂ ಯಡಿಯೂರಪ್ಪ ಆಗ್ರಹ

ನಗರದ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ರೂಪಿಸಲಾಗಿರುವ ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಗೆ ಶೀಘ್ರಗತಿಯಲ್ಲಿ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಒತ್ತಾಯಿಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನಗರದ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ರೂಪಿಸಲಾಗಿರುವ ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಗೆ ಶೀಘ್ರಗತಿಯಲ್ಲಿ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಒತ್ತಾಯಿಸಿದ್ದಾರೆ. 

ನಗರಕ್ಕೆ ನಿನ್ನೆ ಭೇಟಿ ನೀಡಿದ್ದ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರೊಂದಿಗೆ ಚರ್ಚೆ ನಡೆಸಿದ ಯಡಿಯೂರಪ್ಪ ಅವರು, ಮೇಕೆದಾಟು ಯೋಜನೆ ಕುರಿತು ಮಾತುಕತೆ ನಡೆಸಿದ್ದಾರೆ.
 
ಚರ್ಚೆ ವೇಳೆ ಮೇಕೆದಾಟು ಯೋಜನೆ ಪೂರ್ಣಗೊಂಡಿದ್ದೇ ಆದರೆ, ನಗರಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸಲು ಅನುಕೂಲವಾಗುತ್ತದೆ. ಯಾವುದೇ ರೀತಿಯಲ್ಲೂ ವಿವಾದ ತಲೆದೋರದಂತೆ ಕಾನೂನು ವ್ಯಾಪ್ತಿಯಲ್ಲಿಯೇ ಒಪ್ಪಿಗೆ ಕೊಡಿಸುವಂತ ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಕೇಂದ್ರ ಸಚಿವರೂ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಹೇಳಲಾಗುತ್ತಿದೆ. 

ಇದಲ್ಲದೆ ನದಿ ಜೋಡಣೆ ಬಗ್ಗೆಯೂ ಯಡಿಯೂರಪ್ಪ ಅವರು ಮಾತುಕತೆ ನಡೆಸಿದ್ದಾರೆ. ಕೃಷ್ಣಾ, ಕಾವೇರಿ, ಗೋದಾವರಿ ಮತ್ತು ಪೆನ್ನಾರ್ ನದಿಗಳ ಜಲಾನಯನ ಪ್ರದೇಶಗಳಲ್ಲಿನ ನದಿಗಳ ಜೋಡನೆ ಮಾಡಿದರೆ, ರಾಜ್ಯಕ್ಕೆ ನೀರಿನ ಲಭ್ಯತೆ ಹೆಚ್ಚಾಗಲಿದೆ. ಈ ಕಾರ್ಯಕ್ಕೆ ಶೀಘ್ರ ಚಾಲನೆ ಕೊಡುವಂತೆ ಯಡಿಯೂರಪ್ಪ ಅವರು ಮನವಿ ಮಾಡಿಕೊಂಡಿದ್ದಾರೆ. 

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಡನೆಯಲ್ಲಿ ರಾಜ್ಯ ಸರ್ಕಾರ ವಿವಿಧ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದು, ತುಂಗಾ ಮೇಲ್ದಂಡೆ, ಭೀಮಾ ಏತ ನೀರಾವರಿ, ಕಾರಂಜಾ, ರಾಮೇಶ್ವರ ಏತ ನೀರಾವರಿ, ನಾರಾಯಣಪುರ ಎಡದಂಡೆ ಕಾಲುವೆ ಯೋಜನೆಗಳನ್ನು ಪೂರ್ಣಗೊಳಿಸಬೇಕಿದೆ. ಇದಕ್ಕಾರಿ ರೂ.439 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ವೇಳೆ ಹಣ ಬಿಡುಗಡೆ ಮಾಡುವುದಾಕಿ ಗಜೇಂದ್ರ ಅವರು ಭರವಸೆ ನೀಡಿದ್ದಾರೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com