ಎದೆ ಸೀಳಿದರೆ ಎರಡಕ್ಷರ ಇಲ್ಲದ, ಪಂಕ್ಚರ್ ಹಾಕುವವರು ಸಿಎಎ ವಿರೋಧಿಸಿ ಪ್ರತಿಭಟನೆ ಮಾಡಿದ್ದಾರೆ: ತೇಜಸ್ವಿ ಸೂರ್ಯ

ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಹಿಂಸಾಚಾರ ನಡೆದಿತ್ತು. ಅಲ್ಲದೆ ಗೋಲಿಬಾರ್ ನಲ್ಲಿ ಇಬ್ಬರು ಮೃತಪಟ್ಟಿದ್ದರು. ಇದೀಗ ಪೌರತ್ವ ಕಾಯ್ದೆ ಬೆಂಬಲಿಸಿ ನಡೆದ ಜನಜಾಗೃತಿ ಸಭೆಯಲ್ಲಿ ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ

ಬೆಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಹಿಂಸಾಚಾರ ನಡೆದಿತ್ತು. ಅಲ್ಲದೆ ಗೋಲಿಬಾರ್ ನಲ್ಲಿ ಇಬ್ಬರು ಮೃತಪಟ್ಟಿದ್ದರು. ಇದೀಗ ಪೌರತ್ವ ಕಾಯ್ದೆ ಬೆಂಬಲಿಸಿ ನಡೆದ ಜನಜಾಗೃತಿ ಸಭೆಯಲ್ಲಿ ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ಬೆಂಗಳೂರಿನ ಟೌನ್ ಹಾಲ್ ಮುಂದೆ ನಡೆದ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ತೇಜಸ್ವಿ ಸೂರ್ಯ ಅವರು, ಎದೆ ಸೀಳಿದರೆ ಎರಡಕ್ಷರ ಇಲ್ಲದಂತಹ, ಪಂಕ್ಚರ್ ಅಂಗಡಿ ಹಾಕಿಕೊಂಡಿರುವಂತವರು ಈ ಕಾರ್ಯಕ್ರಮಕ್ಕೆ ಬಂದಿಲ್ಲ. ಇಲ್ಲಿ ಯಾರೂ ಯಾರನ್ನೂ ಕರೆದಿಲ್ಲ. ಎಲ್ಲರೂ ಸ್ವಇಚ್ಛೆಯಿಂದ ಬಂದಿದ್ದಾರೆ. ಪೌರತ್ವಕ್ಕೆ ಬೆಂಬಲ ಇದೆ ಎಂಬುದಕ್ಕೆ ಇದೇ ಸಾಕ್ಷಿ ಎಂದರು. 

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಯಾವ ಕಾರಣಕ್ಕೆ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿದೆ ಎಂಬ ಬಗ್ಗೆ ಸರಿಯಾದ ಮಾಹಿತಿ ನೀಡದೆ ಸಾರ್ವಜನಿಕರನ್ನು ತಪ್ಪು ಹಾದಿಗೆ ಎಳೆಯುತ್ತಿದ್ದಾರೆ. ಕಾಂಗ್ರೆಸ್ ಸಾವಿನ ರಾಜಕಾರಣಕ್ಕೆ ಮುಂದಾಗಿದೆ ಎಂದರು. 

ಇನ್ನು ಮಂಗಳೂರಿನಲ್ಲಿ ಇಬ್ಬರ ಸಾವಿಗೆ ಮಾಜಿ ಸಚಿವ ಯುಟಿ ಖಾದರ ಕಾರಣ. ಯುವಕರ ಜೀವದ ಜೊತೆ ಚೆಲ್ಲಾಟವಾಡಬೇಡಿ. ಹೊರದೇಶದಿಂದ ಭಾರತಕ್ಕೆ ವಲಸೆ ಬರುವ ಮುಸ್ಲಿಂರನ್ನು ರಾಷ್ಟ್ರದೊಳಗೆ ಬಿಟ್ಟುಕೊಳ್ಳುವುದಿಲ್ಲ ಎಂದರೆ ಇವರಿಗೇನು ಸಮಸ್ಯೆ? ಎಂದು ಪ್ರಶ್ನಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com