ಗೋಲಿಬಾರ್ ಘಟನೆ ಎಸ್ ಐಟಿ ತನಿಖೆಗೆ ಚಿಂತನೆ-ಬಿ.ಎಸ್. ಯಡಿಯೂರಪ್ಪ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಗೋಲಿಬಾರ್ ವೇಳೆ ಇಬ್ಬರು ಮೃತಪಟ್ಟಿರುವ ಪ್ರಕರಣವನ್ನು ವಿಶೇಷ ತನಿಖಾ ತಂಡದ( ಎಸ್ ಐಟಿ) ಮೂಲಕ ತನಿಖೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಬೆಂಗಳೂರು:  ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಗೋಲಿಬಾರ್ ವೇಳೆ ಇಬ್ಬರು ಮೃತಪಟ್ಟಿರುವ ಪ್ರಕರಣವನ್ನು ವಿಶೇಷ ತನಿಖಾ ತಂಡದ( ಎಸ್ ಐಟಿ) ಮೂಲಕ ತನಿಖೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಲಿಬಾರ್ ನಲ್ಲಿ ಮೃತಪಟ್ಟಿರುವ ನೌಶಿನ್ ಹಾಗೂ ಜಲೀಲ್ ಕುಟುಂಬಕ್ಕೆ ಈಗಾಗಲೇ ತಲಾ 10 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ. ಮಂಗಳೂರಿಗೆ ಭೇಟಿ ಮೃತರಿಬ್ಬರ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಅಲ್ಪಸಂಖ್ಯಾತ ಮುಖಂಡರ ಜೊತೆಗೆ ಸುಮಾರು 1 ಗಂಟೆಗಳ ಕಾಲ ಚರ್ಚಿಸಿ ಸೌಹಾರ್ದ ವಾತಾವರಣ ನಿರ್ಮಾಣಕ್ಕೆ ಪ್ರಯತ್ನ ನಡೆಸಲಾಗಿದೆ ಎಂದರು. 

ಗೋಲಿಬಾರ್ ಕುರಿತು ಸತ್ಯಾಸತ್ಯತೆ ಹೊರಬರಬೇಕಾಗಿದೆ. ಹೀಗಾಗಿ ಎಸ್ಐಟಿಗೆ ತನಿಖೆ ವಹಿಸುವ ಚಿಂತನೆ ನಡೆದಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com