ಮಂಗಳೂರು ಹಿಂಸಾಚಾರ, ಗೋಲಿಬಾರ್: ತನಿಖೆಗೆ ಸಿಎಂ ಆದೇಶ

ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಮಂಗಲೂರಿನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರ ಹಾಗೂ ಗೋಲಿಬಾರ್ ಗೆ ಸಂಬಂಧಿಸಿದಂತೆ ಶೀಘ್ರ ಸೂಕ್ತ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ. 
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಮಂಗಲೂರಿನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರ ಹಾಗೂ ಗೋಲಿಬಾರ್ ಗೆ ಸಂಬಂಧಿಸಿದಂತೆ ಶೀಘ್ರ ಸೂಕ್ತ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ. 

ಮಂಗಳೂರಿಗ ಶನಿವಾರ ಭೇಟಿ ನೀಡಿದ್ದ ಅವರು ಪರಿಸ್ಥಿತಿ ಅವಲೋಕನ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. 

ಈ ವೇಳೆ ಮಂಗಳೂರೂ ಹಿಂಸಾಚಾ, ಗೋಲಿಬಾರ್ ಕುರಿತು ಸಮಗ್ರ ತನಿಖೆನಡೆಸಲಾಗುವುದು. ಗೃಹ ಸಚಿವರ ಜೊತೆಗೂಡಿ ಯಾವ ರೀತಿಯ ತನಿಖೆ ನಡೆಸಬೇಕು ಎಂಬುದನ್ನು ತೀರ್ಮಾನಿಸಲಾಗುವುದು. ಇದಕ್ಕೆ ನಿರ್ದಿಷ್ಠ ಅವಧಿ ಇನ್ನೂ ನಿಗದಿಪಡಿಸಿಲ್ಲ ಎಂದು ಹೇಳಿದ್ದಾರೆ. 

ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೆ, ಹಿಂಸಾಚಾರ ನಡೆಯಲು ಕಾರಣ ಏನು, ಯಾರೆಲ್ಲಾ ಹಿಂಸಾಚಾರ ನಡೆಸಿದ್ದಾರೆ? ಕೇರಳದಿಂದ ಬಂದು ಹಿಂಸಾಚಾರ ನಡೆಸಿದರೇ? ಇಲ್ಲಿಯವರು ಎಷ್ಟು ಮಂದಿ ಪಾಲ್ಗೊಂಡಿದ್ದಾರೆಂಬ ಮಾಹಿತಿ ಪಡೆಯಲಾಗುತ್ತಿದೆ. ಎಲ್ಲಾ ವಿಚಾರಗಳೂ ನನ್ನ ಗಮನದಲ್ಲಿದ್ದು, ಜನತೆ ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com