ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ; ಇದು ಕಾಂಗ್ ಕಾಂಗ್ರೆಸ್ ಕುತಂತ್ರ: ಆರ್ ಅಶೋಕ್

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ಕಾಂಗ್ರೆಸ್ ನ ಕುತಂತ್ರ ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ. 
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ; ಇದು ಕಾಂಗ್ ಕಾಂಗ್ರೆಸ್ ಕುತಂತ್ರ: ಆರ್ ಅಶೋಕ್
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ; ಇದು ಕಾಂಗ್ ಕಾಂಗ್ರೆಸ್ ಕುತಂತ್ರ: ಆರ್ ಅಶೋಕ್

ಮಂಡ್ಯ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ಕಾಂಗ್ರೆಸ್ ನ ಕುತಂತ್ರ ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ. 

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ಅಶೋಕ್, ಎನ್ ಆರ್ ಸಿ ಬಂದು ತಿಂಗಳುಗಳೇ ಕಳೆದಿದೆ. ಆಗ ಯಾರೂ ಪ್ರತಿಭಟನೆ ಮಾಡಲಿಲ್ಲ. ಪೌರತ್ವ ಕಾಯ್ದೆಯಿಂದ ಯಾರಿಗೂ ತೊಂದರೆ ಆಗಲ್ಲ. ಯಾವ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಮಾಡಿಲ್ಲ. ನಮ್ಮ ದೇಶದಲ್ಲಿ ವಾಸ ಮಾಡ್ತಿರೋ ಮುಸ್ಲಿಂರಿಗೆ ಯಾವುದೇ ತೊಂದರೆ ಆಗಲ್ಲ ಎಂದು ಹೇಳಿದ್ದಾರೆ. 

ಕಾಂಗ್ರೆಸ್ಸಿಗರಿಗೆ ಸಚಿವ ಆರ್.ಅಶೋಕ್ ಪ್ರಶ್ನೆ...

ಪೌರತ್ವ ಕಾಯ್ದೆಯಲ್ಲಿ ತಪ್ಪೇನಿದೆ ಹೇಳಿ? ಈ ಕಾಯ್ದೆಯಲ್ಲಿ ಯಾವುದೇ ತಪ್ಪಿಲ್ಲ. ಇದು ಬಹಳ ವರ್ಷಗಳಿಂದ ನಮ್ಮ ಪಕ್ಷದ ಪ್ರಣಾಳಿಕೆಯಾಗಿತ್ತು. ಆವಾಗಿನಿಂದ ಯಾಕೆ ಕಣ್ಣುಮುಚ್ಚಿ ಕುಳಿತಿದ್ರಿ ಈ ಹಿಂದೆಲ್ಲ ನಿಮಗೆ ಕಣ್ಣು ಕಾಣಿಸಿಲ್ವ? ಎಂದು ಆರ್ ಅಶೋಕ್ ಕಾಂಗ್ರೆಸ್ ಗೆ ಪ್ರಶ್ನೆ ಮಾಡಿದ್ದಾರೆ. 

ರಾಜಕೀಯಕ್ಕಾಗಿ ಸುಳ್ಳು ಸುದ್ದಿ ಹಬ್ಬಿಸಿ, ಗೊಂದಲ ಉಂಟು ಮಾಡಬಾರದು, ಇದು ದೇಶದ ಗೌರವದ ಪ್ರಶ್ನೆ, ದೇಶದ ಶೇ.80ರಷ್ಟು ಜನ ಈ ಕಾಯ್ದೆ ಬೇಕು ಅಂತಿದ್ದಾರೆ, ಯಾರೋ ಕೆಲವರು ಬೇಡ ಅಂದ್ರೆ ಬದಲಾವಣೆ ಮಾಡೋಕೆ ಆಗಲ್ಲ, ಯಾವುದೇ ಕಾರಣಕ್ಕೂ ಈ ಕಾಯ್ದೆ ಬದಲಾವಣೆ ಮಾಡಲ್ಲ ಎಂದು ಹೇಳಿದ್ದಾರೆ. 

ಕೆಆರ್​ಎಸ್​ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲು ಸರ್ಕಾರ ಸಿದ್ಧ: ಸಚಿವ ಆರ್.ಅಶೋಕ್​​

ಕೆಆರ್​​ಎಸ್ ಅಣೆಕಟ್ಟೆ ಭದ್ರತೆ ದೃಷ್ಟಿಯಿಂದ ವೈಜ್ಞಾನಿಕ ಅಧ್ಯಯನ ನಡೆಸಿ ಸಂಪೂರ್ಣವಾಗಿ ಕಲ್ಲು ಗಣಿಗಾರಿಕೆ ನಿಲ್ಲಿಸಲು ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರ ಆರ್.ಅಶೋಕ್ ಸ್ಪಷ್ಟನೆ ನೀಡಿದರು.

ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗೆ ಸಭೆಯಲ್ಲೇ ಸೂಚನೆ ನೀಡಿದ ಸಚಿವರು, ಶೀಘ್ರವಾಗಿ ವೈಜ್ಞಾನಿಕವಾಗಿ ಅಧ್ಯಯನ ನಡೆಸಬೇಕು. ಈ ಬಗ್ಗೆ ವರದಿ ನೀಡಿದರೆ, ಕೂಡಲೇ ಕೆಆರ್​ಎಸ್ ಸುತ್ತಮುತ್ತ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ನಿಷೇಧ ಮಾಡಲಾಗುವುದು ಎಂದು ಘೋಷಣೆ ಮಾಡಿದರು.

ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದರಿಂದ ಅವಶ್ಯಕ ಸ್ಥಳಗಳಲ್ಲಿ ಚೆಕ್ ಪೋಸ್ಟ್ ಪ್ರಾರಂಭ ಮಾಡಿ, ಕಳ್ಳರನ್ನು ಹಿಡಿಯಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಗ್ರಾಮ ಲೆಕ್ಕಿಗರು ಸರ್ಕಾರಿ ಆದೇಶದಂತೆ ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆವರೆಗೂ ತಮ್ಮ ಸೇವಾ ವ್ಯಾಪ್ತಿಯಲ್ಲೇ ಕೆಲಸ ನಿರ್ವಹಿಸಬೇಕು. ಅವಶ್ಯಕತೆ ಇದ್ದರೆ ಜಿಲ್ಲಾ ಕೇಂದ್ರ, ತಾಲೂಕು ಕೇಂದ್ರಕ್ಕೂ ಬರಬೇಕು. ಇಲ್ಲವಾದರೆ ಕಾನೂನು ರೀತಿ ಕ್ರಮ ಕೈಗೊಳ್ಳುವುದಾಗಿ ಸಚಿವರು ಎಚ್ಚರಿಕೆ ನೀಡಿದರು.

ಡಿಸೆಂಬರ್ 26ರಿಂದ ಜಿಲ್ಲೆಯಲ್ಲಿ ಭತ್ತ ಖರೀದಿಗೆ ನೋಂದಣಿ ಆರಂಭ ಆಗಲಿದ್ದು, ರೈತರು ನೋಂದಣಿ ಮಾಡಿಸಿಕೊಳ್ಳುವಂತೆ ಮನವಿ ಮಾಡಿದರು. ಶ್ರೀರಂಗಪಟ್ಟಣ ಕ್ಷೇತ್ರ ಹೊರತುಪಡಿಸಿದರೆ ಎಲ್ಲ 5 ಕ್ಷೇತ್ರಗಳ ಜೆಡಿಎಸ್ ಶಾಸಕರು ಇಂದು ಪ್ರಗತಿ ಪರಿಶೀಲನಾ ಸಭೆಗೆ ಆಗಮಿಸಿದ್ದು, ವಿಶೇಷವಾಗಿತ್ತು. ಎಲ್ಲರೂ ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಬಗ್ಗೆ ಸಚಿವರ ಗಮನ ಸೆಳೆದರು.

-ನಾಗಯ್ಯ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com