ಮಂಗಳೂರು ಗಲಭೆ ಪ್ರಕರಣ: ಮ್ಯಾಜಿಸ್ಟ್ರೀಯಲ್ ತನಿಖೆಗೆ ಸರ್ಕಾರ ಆದೇಶ

ಪೌರತ್ವ ತಿದ್ದುಪತಿ ಕಾಯ್ದೆ ಮತ್ತು ರಾಷ್ಟ್ರೀಯ ನೋಂದಣಿ ಕಾಯ್ದೆ ಜಾರಿ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆ ಮತ್ತು ಗಲಭೆ ವೇಳೆ ಗೋಲಿಬಾರ್ ನಲ್ಲಿ ಮೃತಪಟ್ಟ ಪ್ರಕರಣವನ್ನು‌ ರಾಜ್ಯ ಸರ್ಕಾರ ಮ್ಯಾಜಿಸ್ಟ್ರೀಯಲ್  ತನಿಖೆಗೆ ವಹಿಸಿ ಆದೇಶಿಸಿದೆ.
ಮಂಗಳೂರು ಗಲಭೆ ಚಿತ್ರ
ಮಂಗಳೂರು ಗಲಭೆ ಚಿತ್ರ

ಬೆಂಗಳೂರು:ಪೌರತ್ವ ತಿದ್ದುಪತಿ ಕಾಯ್ದೆ ಮತ್ತು ರಾಷ್ಟ್ರೀಯ ನೋಂದಣಿ ಕಾಯ್ದೆ ಜಾರಿ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆ ಮತ್ತು ಗಲಭೆ ವೇಳೆ ಗೋಲಿಬಾರ್ ನಲ್ಲಿ ಇಬ್ಬರು ಮೃತಪಟ್ಟ ಪ್ರಕರಣವನ್ನು‌ ರಾಜ್ಯ ಸರ್ಕಾರ ಮ್ಯಾಜಿಸ್ಟ್ರೀಯಲ್  ತನಿಖೆಗೆ ವಹಿಸಿ ಆದೇಶಿಸಿದೆ.

ಡಿಸೆಂಬರ್ 19 ರಂದು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನೋಂದಣಿ ಕಾಯ್ದೆ ಜಾರಿ ವಿರೋಧಿಸಿ ನಡೆದ ಪ್ರತಿಭ ಟನೆ ಮತ್ತು ಗಲಭೆ ವೇಳೆ ನಡೆದ ಗೋಲಿಬಾರ್ ಪ್ರಕರಣವನ್ನು ರಾಜ್ಯ ಸರ್ಕಾರ ಉಡುಪಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮ್ಯಾಜಿಸ್ಟ್ರೀಯಲ್ ತನಿಖೆ ನಡೆಸುವಂತೆ ಆದೇಶಿಸಿದೆ.

ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರನ್ನು ಕಾರ್ಯಾಕಾರಿ ದಂಡಾಧಿಕಾರಿಯಾಗಿ ನೇಮಿಸಲಾಗಿದ್ದು, ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com