ಶಾಲಾ ಮಕ್ಕಳಿಗೆ ದಿನಕ್ಕೆರಡು ಬಾರಿ ವಾಟರ್ ಬೆಲ್ ಕಡ್ಡಾಯ: ಶಿಕ್ಷಣ ಇಲಾಖೆ ಆದೇಶ

ಶಾಲಾ ಅವಧಿಯಲ್ಲಿ ವಿದ್ಯಾರ್ಥಿಗಳು ಬಾಯಾರಿಕೆಯನ್ನು ನಿವಾರಿಸುವ ವಾಟರ್ ಬೆಲ್ ಯೋಜನಯನ್ನು ರಾಜ್ಯದಲ್ಲಿಯೂ ಜಾರಿಗೆ ತರಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಶಾಲಾ ಅವಧಿಯಲ್ಲಿ ವಿದ್ಯಾರ್ಥಿಗಳು ಬಾಯಾರಿಕೆಯನ್ನು ನಿವಾರಿಸುವ ವಾಟರ್ ಬೆಲ್ ಯೋಜನಯನ್ನು ರಾಜ್ಯದಲ್ಲಿಯೂ ಜಾರಿಗೆ ತರಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 

ಬೆಳಿಗ್ಗೆ ಮತ್ತು ಮಧ್ಯಾಹ್ನ ತಲಾ 10 ನಿಮಿಷವನ್ನು ಮಕ್ಕಳಿಗೆ ನೀರು ಕುಡಿಯುವುದಕ್ಕಾಗಿ ಮೀಸಲಿಡುವಂತೆ ಶಾಲೆಗಳಿಗೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. 

ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ಶಾಲೆಗಳಲ್ಲಿ ವ್ಯಾಸಾಗ ಮಾಡುತ್ತಿರುವ ವಿದ್ಯಾರ್ಥಿಗಳು ಶಾಲಾ ಅವಧಿಯಲ್ಲಿ ಅಗತ್ಯ ಪ್ರಮಾಣದ ಶುದ್ಧ ನೀರನ್ನು ಕುಡಿಯಲು ಕುಡಿಯವ ನೀರಿನ ಬೆಲ್ ಎಂಬ ವಿಶೇಷ ಸಮಯದ ನಿಗದಿ ಪಡಿಸುವಂತೆ ಶಾಲೆಗಳಿಗೆ ಸೂಚನೆ ನೀಡಿದೆ. 

ಪ್ರತಿದಿನ ಶಾಲಾವಧಿಯ ಬೆಳಿಗ್ಗೆ ಎರಡು ಮತ್ತು ಮೂರನೇ ಅವಧಿ ನಡುವಿನ 10 ನಿಮಿಷ ಹಾಗೂ ಮಧ್ಯಾಹ್ನ ಮೂರು ಮತ್ತು ನಾಲ್ಕನೇ ಅವಧಿ ನಡುವೆ 10 ನಿಮಿಷ ಅವಧಿಯನ್ನು ಮಕ್ಕಳಿಗೆ ನೀರು ಕುಡಿಯಲು ಮೀಸಲಿಡುವಂತೆ ತಿಳಿಸಿವೆ. ಈ 10 ನಿಮಿಷವನ್ನು ಕುಡಿಯುವ ನೀರಿನ ಬೆಲ್ ಅವಧಿಯನ್ನಾಗಿ ನಿಗದಿಪಡಿಸಬೇಕು. ಕಡ್ಡಾಯವಾಗಿ ವಾಟಲ್ ಬೆಲ್ ಬಾರಿಸಬೇಕು ಎಂದು ಸೂಚನೆ ನೀಡಿದೆ. 

ಕೇರಳ ಸರ್ಕಾರ ಯೋಜನೆ ಜಾರಿಗೊಳಿಸಿದ ಸಂದರ್ಭದಲ್ಲಿಯೇ ಅದನ್ನು ಸ್ವಾಗತಿಸಿ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಇದೀಗ ಅಧಿಕೃತವಾಗಿ ಯೋಜನೆಯನ್ನು ರಾಜ್ಯದಲ್ಲಿಯೂ ಜಾರಿಗೊಳಿಸಿದ್ದಾರೆ. 

ಶಾಲಾ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆಯೇ ಎಂದು ಶಿಕ್ಷಕರು ಖಾತ್ರಿಪಡಿಸಿಕೊಳ್ಳಬೇಕು. ಮಕ್ಕಳೆ ಸ್ವತಃ ಬಾಟಲಿಯಲ್ಲಿ ನೀರು ತಂದು ಉಪಯೋಗಿಸುತ್ತಿದ್ದರೆ ಅವಕಾಶ ನೀಡಬೇಕು. ಜೊತೆಗೆ, ಕುಡಿಯುವ ನೀರಿನ ವ್ಯವಸ್ಥೆಗಾಗಿ ಗ್ರಾಮ ಪಂಚಾಯತಿ, ದಾನಿಗಳ ನೆರವಿನೊಂದಿಗೆ ಶುದ್ಧ ನೀರಿನ ಘಟಕಗಳನ್ನು ನಿರ್ಮಿಸಬೇಕು. 

ಶಾಲಾ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರು ನೀರಿನ ಬೆಲ್ ಅವಧಿಯಲ್ಲಿ ಸಾಕಷ್ಟು ಪ್ರಮಾಣದ ಶುದ್ಧ ಕುಡಿಯುವ ನೀರು ಸಂಗ್ರಹಿಸಿ ಲೋಟಗಳ ಮೂಲಕ ಮಕ್ಕಳು ಕುಡಿಯಲು ಅನುಕೂಲವಾಗುವಂತೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ನಿಗದಿಪಡಿಸಿರುವ ಅವಧಿ ಹೊರತಾಗಿಯೂ ಮಕ್ಕಳು ನೀರು ಕುಡಿಯಲು ಇಚ್ಛಿಸಿದರೆ ಅವಕಾಶ ಮಾಡಿಕೊಡಬೇಕೆಂದು ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com