'ಕೇರಳದ ದೇಗುಲಕ್ಕೆ ತೆರಳಿದಾಗ ನಡೆದ ಘಟನೆ ಪಟ್ಟಭದ್ರ ಹಿತಾಸಕ್ತಿಗಳ ಸಂಚು'

ಕೇರಳದ ದೇಗುಲಕ್ಕೆ ತೆರಳಿದಾಗ ನಡೆದ ಘಟನೆ ಪಟ್ಟಭದ್ರ ಹಿತಾಸಕ್ತಿಗಳ ಸಂಚು. ಮೊದಲಿನಿಂದಲೂ ನಾನು ದೈವತ್ವದಲ್ಲಿ ಅಪಾರ ನಂಬಿಕೆ ಇಟ್ಟುಕೊಂಡವನು ಎಂದು  ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಕೇರಳದ ದೇಗುಲಕ್ಕೆ ತೆರಳಿದಾಗ ನಡೆದ ಘಟನೆ ಪಟ್ಟಭದ್ರ ಹಿತಾಸಕ್ತಿಗಳ ಸಂಚು. ಮೊದಲಿನಿಂದಲೂ ನಾನು ದೈವತ್ವದಲ್ಲಿ ಅಪಾರ ನಂಬಿಕೆ ಇಟ್ಟುಕೊಂಡವನು ಎಂದು  ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಇದು ನನ್ನ ವೈಯುಕ್ತಿಕ ಭೇಟಿ. ಕೆಲವರ ಕುಕೃತ್ಯಕ್ಕೆ ಎಲ್ಲ ಕೇರಳಿಗರನ್ನೂ ದೂಷಿಸುವುದು ತಪ್ಪು. ದೇವರ ನಾಡಿನಲ್ಲಾದ ಇಂತಹ ಘಟನೆ ಕೇರಳದ ಘನತೆಯನ್ನು ತಗ್ಗಿಸದಿರಲಿ ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಹೇಳಿದ್ದಾರೆ.

ಕೇರಳದ ದೇಗುಲಕ್ಕೆ ತೆರಳಿದಾಗ ನಡೆದ ಘಟನೆ ಪಟ್ಟಭದ್ರ ಹಿತಾಸಕ್ತಿಗಳ ಸಂಚು. ಮೊದಲಿನಿಂದಲೂ ನಾನು ದೈವತ್ವದಲ್ಲಿ ಅಪಾರ ನಂಬಿಕೆ ಇಟ್ಟುಕೊಂಡವನು. ಇದು ನನ್ನ ವೈಯುಕ್ತಿಕ ಭೇಟಿ. ಕೆಲವರ ಕುಕೃತ್ಯಕ್ಕೆ ಎಲ್ಲ ಕೇರಳಿಗರನ್ನೂ ದೂಷಿಸುವುದು ತಪ್ಪು. ದೇವರ ನಾಡಿನಲ್ಲಾದ ಇಂತಹ ಘಟನೆ ಕೇರಳದ ಘನತೆಯನ್ನು ತಗ್ಗಿಸದಿರಲಿ.

ವಿಶೇಷ ಪೂಜೆ ಹೋಮ ಹವನ ಮಾಡಿಸಲು ಸಿಎಂ ಯಡಿಯೂರಪ್ಪ ನಿನ್ನೆ ರಾತ್ರಿ ಕೇರಳಕ್ಕೆ ತೆರಳಿದ್ದರು. ಬೆಂಗಳೂರಿನಿಂದ ನೇರವಾಗಿ ತಿರುವನಂತಪುರಂ ಗೆ ತೆರಳಿದ್ದ ಸಿಎಂಗೆ ಏರಪೋರ್ಟ್ ನಲ್ಲಿಯೇ ಪ್ರತಿಭಟನೆ ಬಿಸಿ ತಟ್ಟಿತ್ತು. ಕೇರಳದ ಏರ್ ಪೋರ್ಟ್ ನ ಹೊರ ಭಾಗದಲ್ಲಿ ಜಮಾಯಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು, ಗೋ ಬ್ಯಾಕ್ ಬಿ.ಎಸ್ ವೈ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು. ಬಳಿಕ ಕಣ್ಣೂರಿನ ದೇವಸ್ಥಾನವೊಂದರಲ್ಲಿ ದರ್ಶನ ಪಡೆಯಲು ಹೊರಡುವಾಗಲೂ ಮಾರ್ಗ ಮಧ್ಯದಲ್ಲಿ 50ಕ್ಕೂ ಅಧಿಕ ಪ್ರತಿಭಟನಾಕಾರರ ಗುಂಪು ಕಪ್ಪುಪಟ್ಟಿ ಪ್ರದರ್ಶಿಸಿ ಪ್ರತಿಭಟನೆ ನಡೆಸಿತ್ತು ಇದೇ ವಿಚಾರವಾಗಿ ಯಡಿಯೂರಪ್ಪ ಟ್ವೀಟ್​ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com